ಜ್ಞಾನೋಕ್ತಿಗಳು 29:25 - ಪರಿಶುದ್ದ ಬೈಬಲ್25 ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು. ಅಧ್ಯಾಯವನ್ನು ನೋಡಿ |
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.
ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’