ಜ್ಞಾನೋಕ್ತಿಗಳು 29:4 - ಪರಿಶುದ್ದ ಬೈಬಲ್4 ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನ್ಯಾಯಪಾಲಕ ರಾಜನಿಂದ ನಾಡಿನ ಅಭಿವೃದ್ಧಿ; ಲಂಚಕೋರ ಅರಸನಿಂದ ದೇಶ ಹಿಡಿವುದು ವಿನಾಶದ ಹಾದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು; ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ, ಆದರೆ ಲಂಚಕೋರ ಅಧಿಕಾರಿ ದೇಶವನ್ನು ಕೆಡವಿ ಹಾಕುತ್ತಾನೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.