Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:7 - ಪರಿಶುದ್ದ ಬೈಬಲ್‌

7 ನೀತಿವಂತರು ಬಡವರಿಗೆ ಒಳ್ಳೆಯದನ್ನು ಮಾಡಲು ಇಷ್ಟಪಡುತ್ತಾರೆ. ಕೆಡುಕರಾದರೋ ಬಡವರನ್ನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀತಿವಂತನು ದಲಿತರ ಹಕ್ಕುಬಾಧ್ಯತೆಯನ್ನು ಕಾದಿರಿಸುವನು; ದುಷ್ಟರಿಗಿಲ್ಲ ಅದನ್ನು ಗ್ರಹಿಸುವಷ್ಟು ಅಕ್ಕರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು; ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಡವರ ನ್ಯಾಯಕ್ಕಾಗಿ ನೀತಿವಂತನು ಚಿಂತಿಸುತ್ತಾನೆ. ಆದರೆ ದುಷ್ಟನಿಗೆ ಅಂಥಾ ಚಿಂತೆಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:7
16 ತಿಳಿವುಗಳ ಹೋಲಿಕೆ  

ನಾನು ಬಡವರಿಗೆ ತಂದೆಯಂತಿದ್ದೆನು. ತೊಂದರೆಯಲ್ಲಿದ್ದ ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.


ಯಾವನು ಬಡಜನರನ್ನು ಅಭಿವೃದ್ಧಿಪಡಿಸುವನೋ ಅವನೇ ಧನ್ಯನು. ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


ಬಡವರಿಗೆ ಸಹಾಯಮಾಡದವನು ತಾನೇ ಕೊರತೆಯಲ್ಲಿರುವಾಗ ಯಾರೂ ಅವನಿಗೆ ಸಹಾಯ ಮಾಡುವುದಿಲ್ಲ.


ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.


ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಬೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.


ನನಗೆ ನ್ಯಾಯಸ್ಥಾನದಲ್ಲಿ ಬೆಂಬಲವಿದ್ದರೂ ಅನಾಥರನ್ನು ಕಂಡು ನಾನೆಂದೂ ಅವರ ಮೇಲೆ ಕೈ ಮಾಡಲಿಲ್ಲ.


“ನನ್ನ ಸೇವಕಸೇವಕಿಯರು ನನಗೆ ವಿರೋಧವಾಗಿ ದೂರನ್ನು ಹೊಂದಿದ್ದಾಗ ನಾನು ಅವರಿಗೆ ನ್ಯಾಯವನ್ನು ದೊರಕಿಸಿಲ್ಲದಿದ್ದರೆ


ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.


ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. ನನ್ನ ಸಂಕಟವನ್ನು ನೀನು ನೋಡಿರುವೆ; ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ.


ನೀನು ಕಳುಹಿಸಿದ ಜನರನ್ನು ನಾನು ನೋಡಲಿಲ್ಲ. ಒಡೆಯನೇ, ಮೂರ್ಖನಾದ ಆ ಮನುಷ್ಯನ ಮೇಲೆ ಯಾವ ಲಕ್ಷ್ಯವನ್ನೂ ಇಡಬೇಡ. ಅವನು ತನ್ನ ಹೆಸರಿಗೆ ತಕ್ಕಂತೆ ಇದ್ದಾನೆ. ಅವನ ಹೆಸರಿನ ಅರ್ಥವೂ ‘ಮೂರ್ಖ’ ಮತ್ತು ಅವನು ನಿಜವಾಗಿಯೂ ಮೂರ್ಖ.


ನಮ್ಮ ರಾಜನು ನಿಸ್ಸಹಾಯಕರಿಗೆ ಸಹಾಯ ಮಾಡುವನು. ನಮ್ಮ ರಾಜನು ಬಡವರಿಗೂ ಅಸಹಾಯಕರಿಗೂ ಸಹಾಯ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು