Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:8 - ಪರಿಶುದ್ದ ಬೈಬಲ್‌

8 ದುರಾಭಿಮಾನಿಗಳು ಇಡೀ ಪಟ್ಟಣವನ್ನೇ ಬೇಸರಗೊಳಿಸುವರು. ಜ್ಞಾನಿಗಳಾದರೋ ಕೋಪದ ಜ್ವಾಲೆಗಳನ್ನು ನಂದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಗ್ನಿಯನ್ನು ಆರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕುಚೋದ್ಯರು ಪಟ್ಟಣಕ್ಕೆ ಬೆಂಕಿ ಹಚ್ಚುವರು; ಜ್ಞಾನಿಗಳೊ ರೋಷಾಗ್ನಿಯನ್ನು ಆರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು; ಜ್ಞಾನಿಗಳೋ ರೋಷಾಗ್ನಿಯನ್ನಾರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪರಿಹಾಸ್ಯಗಾರರು ಪಟ್ಟಣದಲ್ಲಿ ಗಲಾಟೆ ಎಬ್ಬಿಸುತ್ತಾರೆ. ಆದರೆ ಜ್ಞಾನಿಗಳು ಕೋಪವನ್ನು ಆರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:8
19 ತಿಳಿವುಗಳ ಹೋಲಿಕೆ  

ಪಟ್ಟಣವು ತನ್ನಲ್ಲಿ ವಾಸವಾಗಿರುವ ಯಥಾರ್ಥವಂತರ ಆಶೀರ್ವಾದದಿಂದ ಏಳಿಗೆ ಹೊಂದುವುದು. ಕೆಡುಕರ ಮಾತುಗಳು ಪಟ್ಟಣವನ್ನು ನಾಶಮಾಡುತ್ತವೆ.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.


“ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.


ಅವನು ಸತ್ತವರಿಗೂ ಬದುಕಿರುವವರಿಗೂ ನಡುವೆ ನಿಂತುಕೊಂಡನು. ಆಗ ಕಾಯಿಲೆ ನಿಂತುಹೋಯಿತು.


ಜ್ಞಾನಿಯು ಮೂಢನೊಂದಿಗೆ ನ್ಯಾಯಾಲಯಕ್ಕೆ ಹೋದರೆ, ಮೂಢನು ಕೇವಲ ಆರ್ಭಟಿಸುವನು; ಹುಚ್ಚುಚ್ಚಾಗಿ ಕೂಗಾಡುವನು; ಅವರಿಗೆ ಪರಿಹಾರ ದೊರೆಯುವುದಿಲ್ಲ.


ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು