ಜ್ಞಾನೋಕ್ತಿಗಳು 3:14 - ಪರಿಶುದ್ದ ಬೈಬಲ್14 ಜ್ಞಾನವು ಬೆಳ್ಳಿಗಿಂತಲೂ ಲಾಭದಾಯಕ. ಅದರ ಆದಾಯವು ಬಂಗಾರಕ್ಕಿಂತಲೂ ಅಧಿಕ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಬೆಳ್ಳಿಗಿಂತ ಜ್ಞಾನ ಗಳಿಕೆ ಶ್ರೇಷ್ಠ, ಬಂಗಾರಕ್ಕಿಂತ ಜ್ಞಾನ ಸಂಪಾದನೆ ಉತ್ಕೃಷ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ ಜ್ಞಾನವು ಬೆಳ್ಳಿಗಿಂತ ಹೆಚ್ಚು ಲಾಭವೂ; ಬಂಗಾರಕ್ಕಿಂತ ಹೆಚ್ಚು ಆದಾಯವನ್ನು ಕೊಡುವುದು. ಅಧ್ಯಾಯವನ್ನು ನೋಡಿ |
ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.