Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:26 - ಪರಿಶುದ್ದ ಬೈಬಲ್‌

26 ಯೆಹೋವನು ನಿನ್ನೊಂದಿಗಿದ್ದಾನೆ. ನೀನು ಬಲೆಗೆ ಸಿಕ್ಕಿಬೀಳದಂತೆ ಆತನು ನಿನ್ನನ್ನು ಕಾಪಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರನೇ ನಿನಗೆ ಆಧಾರವಾಗಿರುವನು, ನಿನ್ನ ಕಾಲು ಉರುಲಿಗೆ ಸಿಕ್ಕದಂತೆ ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು ನಿನ್ನ ಕಾಲು ಪಾಶಕ್ಕೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ ಯೆಹೋವ ದೇವರೇ ನಿನಗೆ ಭರವಸೆ ಆಗಿದ್ದಾರೆ, ನಿನ್ನ ಪಾದವು ಉರುಲಿಗೆ ಸಿಕ್ಕದಂತೆ ಅವರು ಕಾಪಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:26
7 ತಿಳಿವುಗಳ ಹೋಲಿಕೆ  

ಯೆಹೋವನಲ್ಲಿ ಭಯಭಕ್ತಿಯುಳ್ಳವನು ಕ್ಷೇಮವಾಗಿರುವನು; ಅವನ ಮಕ್ಕಳು ಸಹ ಕ್ಷೇಮವಾಗಿರುವರು.


ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವಾದ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.


ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.


ನೀನು ದೇವರಲ್ಲಿ ಭಯಭಕ್ತಿಯಿಂದಿರುವುದರಿಂದ ಆತನಲ್ಲಿ ಭರವಸವಿಡು. ನೀನು ನೀತಿವಂತನಾಗಿರುವುದರಿಂದ ಅದೇ ನಿನ್ನ ನಿರೀಕ್ಷೆಯಾಗಿರಲಿ.


ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ; ನಿನ್ನ ಸಂರಕ್ಷಕನು ನಿದ್ರೆಹೋಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು