Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:27 - ಪರಿಶುದ್ದ ಬೈಬಲ್‌

27 ನಿನಗೆ ಸಾಧ್ಯವಾದಾಗಲೆಲ್ಲಾ ಉಪಕಾರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಿನ್ನ ಕೈಲಾದಾಗ ಉಪಕಾರಮಾಡು, ಕೇಳುವವರಿಗೆ ಅದನ್ನು ನಿರಾಕರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಉಪಕಾರಮಾಡುವದಕ್ಕೆ ನಿನ್ನ ಕೈಲಾದಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಿನಗೆ ಶಕ್ತಿಯಿರುವಾಗಲೇ ಇತರರಿಗೆ ಉಪಕಾರಮಾಡು ಒಳಿತು ಮಾಡುವುದನ್ನು ನಿನ್ನಲ್ಲಿಯೇ ಇಟ್ಟುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:27
8 ತಿಳಿವುಗಳ ಹೋಲಿಕೆ  

ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.


ನೀವು ಯಾರ್ಯಾರಿಗೆ ಏನೇನು ಕೊಡಬೇಕೋ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೋ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ನಿನಗೆ ಕೇಡುಮಾಡಲು ನನಗೆ ಶಕ್ತಿಯಿದೆ. ಆದರೆ ಕಳೆದ ರಾತ್ರಿ ನಿನ್ನ ತಂದೆಯ ದೇವರು ಕನಸಿನಲ್ಲಿ ನನಗೆ ಕಾಣಿಸಿಕೊಂಡು, ನಿನಗೆ ಕೇಡುಮಾಡಕೂಡದೆಂದು ನನಗೆ ಎಚ್ಚರಿಕೆ ಕೊಟ್ಟನು.


ಪಾಪಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಅವರನ್ನು ಹಿಂದಕ್ಕೆ ಕಳುಹಿಸುವಾಗ ಬರೀಗೈಯಲ್ಲಿ ಕಳುಹಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು