ಜ್ಞಾನೋಕ್ತಿಗಳು 3:3 - ಪರಿಶುದ್ದ ಬೈಬಲ್3 ಪ್ರೀತಿಯೂ ನಂಬಿಗಸ್ತಿಕೆಯೂ ನಿನ್ನನ್ನು ಬಿಟ್ಟು ಹೋಗದಿರಲಿ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಪ್ರೀತಿಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ, ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ. ಅಧ್ಯಾಯವನ್ನು ನೋಡಿ |
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.