Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:30 - ಪರಿಶುದ್ದ ಬೈಬಲ್‌

30 ನಿನಗೆ ಕೇಡನ್ನು ಮಾಡಿಲ್ಲದಿರುವವನನ್ನು ನಿಷ್ಕಾರಣವಾಗಿ ನ್ಯಾಯಾಲಯಕ್ಕೆ ಕೊಂಡೊಯ್ಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನಗೆ ಅಪಕಾರ ಮಾಡದವನ ಸಂಗಡ ಸುಮ್ಮನೆ ಜಗಳವಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಿನಗೆ ಕೇಡು ಮಾಡದವನ ಸಂಗಡ, ಕಾರಣವಿಲ್ಲದೆ ಜಗಳವಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿನಗೆ ಅಪಕಾರಮಾಡದವನ ಸಂಗಡ ಸುಮ್ಮನೆ ಜಗಳವಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಒಬ್ಬನು ನಿನಗೆ ಯಾವ ತೊಂದರೆ ಮಾಡದಿದ್ದರೆ, ಅವನೊಂದಿಗೆ ಕಾರಣವಿಲ್ಲದೆ ದೂರು ನುಡಿಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:30
10 ತಿಳಿವುಗಳ ಹೋಲಿಕೆ  

ಪ್ರಭುವಿನ ಸೇವಕನು ವಾಗ್ವಾದ ಮಾಡಲೇಬಾರದು. ಅವನು ಪ್ರತಿಯೊಬ್ಬರಿಗೂ ದಯೆತೋರಬೇಕು; ಒಳ್ಳೆಯ ಉಪದೇಶಕನಾಗಿರಬೇಕು; ತಾಳ್ಮೆಯಿಂದಿರಬೇಕು.


ಕೋಪಿಷ್ಠನು ಜಗಳ ಎಬ್ಬಿಸುವನು. ಉದ್ರೇಕಗೊಂಡವನು ಅನೇಕ ಪಾಪಗಳನ್ನು ಮಾಡುವನು.


ಮೂಢನು ವಾದಕ್ಕೆ ಇಳಿಯುತ್ತಾನೆ; ಅವನ ಮಾತುಗಳು ಜಗಳವನ್ನು ಎಬ್ಬಿಸಿ, ಏಟಿಗಾಗಿ ಕೇಳಿಕೊಳ್ಳುತ್ತವೆ.


ವಾದವು ಜಲಾಶಯದ ಕಟ್ಟೆಯಲ್ಲಿ ಮಾಡುವ ರಂಧ್ರಕ್ಕೆ ಸಮಾನ. ಅದು ಹೆಚ್ಚೆಚ್ಚು ದೊಡ್ಡದಾಗುವುದಕ್ಕಿಂತ ಮೊದಲೇ ನಿಲ್ಲಿಸು.


ಬೇರೆಯವರ ವಾಗ್ವಾದದಲ್ಲಿ ಮಧ್ಯೆ ಪ್ರವೇಶಿಸಲು ಮಾಡುವ ಪ್ರಯತ್ನ ಹಾದಿಯಲ್ಲಿ ಹೋಗುತ್ತಿರುವ ನಾಯಿಯ ಕಿವಿಗಳನ್ನು ಹಿಡಿದುಕೊಳ್ಳುವಷ್ಟೇ ಅಪಾಯಕರ.


ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು