ಜ್ಞಾನೋಕ್ತಿಗಳು 30:10 - ಪರಿಶುದ್ದ ಬೈಬಲ್10 ಸೇವಕನ ಬಗ್ಗೆ ಯಜಮಾನನಿಗೆ ಚಾಡಿ ಹೇಳಬೇಡ. ನೀನು ಹೇಳಿದರೆ, ಅವನು ನಿನ್ನನ್ನು ಶಪಿಸುವನು; ಆ ಶಾಪದಿಂದ ನೀನು ಸಂಕಟಪಡುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದಾಸನ ವಿರುದ್ಧ ದಣಿಗೆ ದೂರು ಹೇಳಬೇಡ; ಅವನು ನಿನ್ನನ್ನು ಶಪಿಸಾನು, ನಿನ್ನಲ್ಲೆ ದೋಷ ಕಂಡುಬಂದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ; ಅವನು ಶಪಿಸಾನು; ನಿನ್ನಲ್ಲೇ ದೋಷವು ಕಂಡುಬಂದೀತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಕೆಲಸಗಾರರ ವಿಷಯವಾಗಿ ಅವನ ಯಜಮಾನನಿಗೆ ದೂರು ಹೇಳಬೇಡ; ಇದರಿಂದ ಆ ಕೆಲಸಗಾರ ನಿನ್ನನ್ನು ಶಪಿಸಾನು, ಆಗ ನೀನು ದೋಷಿಯಾಗುವೆ. ಅಧ್ಯಾಯವನ್ನು ನೋಡಿ |
ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.
“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.