Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:14 - ಪರಿಶುದ್ದ ಬೈಬಲ್‌

14 ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಖಡ್ಗದಂಥ ಹಲ್ಲುಗಳು, ಕತ್ತಿಯಂಥ ಕೋರೆಗಳೂ ಉಳ್ಳವರಿದ್ದಾರೆ. ನಾಡಿನ ಬಡವರನ್ನು ಇವರು ತಿಂದುಬಿಡುವರು; ಜನರಲ್ಲಿ ದಿಕ್ಕಿಲ್ಲದವರನ್ನು ಇವರು ನುಂಗಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂವಿುಯೊಳಗಿಂದ ಬಡವರನ್ನೂ ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ ಅಗಿದು ನುಂಗಿಬಿಡುವ ಮತ್ತೊಂದು ತರದವರುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಖಡ್ಗಗಳಂತೆ ಹಲ್ಲುಗಳುಳ್ಳವರೂ ಚೂರಿಗಳಂತೆ ದವಡೆಗಳುಳ್ಳವರೂ ಬಡವರನ್ನು ಭೂಮಿಯಿಂದಲೂ ದಿಕ್ಕಿಲ್ಲದವರನ್ನು ಮಾನವಕುಲದಿಂದಲೂ ಕಬಳಿಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:14
33 ತಿಳಿವುಗಳ ಹೋಲಿಕೆ  

ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.


ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.


ದುಷ್ಟರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.


ನಾನು ದುಷ್ಟರ ಕೋರೆಗಳನ್ನು ಮುರಿದು ಅವರ ಬಾಯೊಳಗಿಂದ ಬೇಟೆಗಳನ್ನು ಕಿತ್ತು ತರುತ್ತಿದ್ದೆನು.


ತಲೆಕೂದಲು ಸ್ತ್ರೀಯರ ತಲೆಕೂದಲಂತಿತ್ತು; ಹಲ್ಲುಗಳು ಸಿಂಹಗಳ ಹಲ್ಲುಗಳಂತಿದ್ದವು.


ನನ್ನ ಮಾತುಗಳನ್ನು ಕೇಳಿರಿ! ಜನರೇ, ನೀವು ಬಡವರ ಮೇಲೆ ನಡೆದಾಡುತ್ತೀರಿ. ಈ ದೇಶದ ಬಡಜನರನ್ನು ನಾಶಮಾಡುತ್ತೀರಿ.


ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.


ಯೆಹೋವನೇ, ಅವರು ಸಿಂಹಗಳಂತಿದ್ದಾರೆ. ದೇವರೇ, ಅವರ ಹಲ್ಲುಗಳನ್ನು ಮುರಿದುಹಾಕು.


ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.


ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನೂ ಸುಲಭವಾಗಿ ಗೆಲ್ಲುವೆವೆಂದು ಅವರು ನೆನೆಸಿದ್ದರು.


ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.


ಆ ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೇ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು.


ದುಷ್ಟನು ದುಷ್ಟತನವನ್ನು ಉಪಕರಣವನ್ನಾಗಿ ಬಳಸಿಕೊಳ್ಳುವನು. ಬಡಜನರಿಂದ ಪ್ರತಿಯೊಂದನ್ನು ತೆಗೆದುಕೊಳ್ಳಲು ಅವನು ಆಲೋಚಿಸುವನು, ಸುಳ್ಳುಗಳನ್ನು ಹೇಳುವನು. ಅವನ ಸುಳ್ಳುಗಳು ಬಡವನಿಗೆ ನ್ಯಾಯದೊರಕದಂತೆ ಮಾಡುತ್ತವೆ.


ಬಡಜನರನ್ನು ದರೋಡೆಮಾಡುವ ಬಡವನು ಬೆಳೆಯನ್ನು ನಾಶಮಾಡುವ ಬಿರುಸಾದ ಮಳೆಯಂತಿರುವನು.


ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ.


ದುಡುಕಿದ ಮಾತು ಖಡ್ಗದಂತೆ ನೋವು ಮಾಡುತ್ತದೆ; ಜ್ಞಾನಿಯ ಮಾತು ಗುಣಪಡಿಸುತ್ತದೆ.


ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕ್ಷೌರ ಕತ್ತಿಯಂತಿದ್ದು ನಾಶನದ ಸಂಚುಗಳನ್ನೇ ಮಾಡುವುದು.


ಯೆಹೋವನಿಗೆ ಸ್ತೋತ್ರವಾಗಲಿ! ನಮ್ಮ ಶತ್ರುಗಳು ನಮ್ಮನ್ನು ಹಿಡಿದು ಕೊಲ್ಲಲು ಆತನು ಅವಕಾಶ ಕೊಡಲಿಲ್ಲ.


ಕೆಲವರು ರಕ್ತ ಕುಡಿಯುವ ಜಿಗಣೆಗಳಂತಿದ್ದಾರೆ. ಅವರು, “ನನಗೆ ಕೊಡು, ನನಗೆ ಕೊಡು, ನನಗೆ ಕೊಡು” ಎಂದು ಹೇಳುತ್ತಾರೆ. ಎಂದಿಗೂ ತೃಪ್ತಿಯಾಗದ ಮೂರು ಸಂಗತಿಗಳಿವೆ. ನಿಜವಾಗಿಯೂ ನಾಲ್ಕು ಸಂಗತಿಗಳು ಎಂದಿಗೂ ಸಾಕು ಎನ್ನವು:


ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು. ಯೆಹೋವನು ಹೇಳುವುದೇನೆಂದರೆ: “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ.


ಬಲವಂತದಿಂದ ಅದರ ದವಡೆಗಳನ್ನು ತೆರೆಸಲು ಯಾರಿಗೂ ಸಾಧ್ಯವಿಲ್ಲ. ಅದರ ದವಡೆಹಲ್ಲುಗಳು ಜನರನ್ನು ಭಯಗೊಳಿಸುತ್ತವೆ.


ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.


ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.


ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.


“‘ಇಗೋ, ಜೆರುಸಲೇಮಿನಲ್ಲಿ ಇತರರನ್ನು ಕೊಲ್ಲುವದಕ್ಕಾಗಿಯೇ ತಮ್ಮನ್ನು ಬಲಿಷ್ಠರನ್ನಾಗಿ ಮಾಡಿಕೊಂಡಿರುವ ಇಸ್ರೇಲಿನ ಅಧಿಪತಿಗಳು ಇದ್ದಾರೆ.


ನೀವು ಕೊಬ್ಬಿದ ಕುರಿಯ ಮಾಂಸವನ್ನು ತಿನ್ನುತ್ತೀರಿ; ಅದರ ಉಣ್ಣೆಯಿಂದ ಬಟ್ಟೆಯನ್ನು ತಯಾರಿಸುತ್ತೀರಿ. ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು