Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:15 - ಪರಿಶುದ್ದ ಬೈಬಲ್‌

15 ಕೆಲವರು ರಕ್ತ ಕುಡಿಯುವ ಜಿಗಣೆಗಳಂತಿದ್ದಾರೆ. ಅವರು, “ನನಗೆ ಕೊಡು, ನನಗೆ ಕೊಡು, ನನಗೆ ಕೊಡು” ಎಂದು ಹೇಳುತ್ತಾರೆ. ಎಂದಿಗೂ ತೃಪ್ತಿಯಾಗದ ಮೂರು ಸಂಗತಿಗಳಿವೆ. ನಿಜವಾಗಿಯೂ ನಾಲ್ಕು ಸಂಗತಿಗಳು ಎಂದಿಗೂ ಸಾಕು ಎನ್ನವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಜಿಗಣೆಗೆ “ಕೊಡು, ಕೊಡು” ಎಂಬ ಇಬ್ಬರು ಹೆಣ್ಣು ಮಕ್ಕಳುಂಟು; ಎಂದೂ ತೃಪ್ತಿಪಡೆಯದವು ಮೂರುಂಟು; ಹೌದು, ‘ಸಾಕು’ ಎನ್ನದವುಗಳು ನಾಲ್ಕುಂಟು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು; ಹೌದು, ಸಾಕೆನ್ನದವುಗಳು ನಾಲ್ಕು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಜಿಗಣೆಗೆ, ‘ಕೊಡು! ಕೊಡು!’ ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳುಂಟು. “ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ, ಹೌದು, ‘ಸಾಕು!’ ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:15
26 ತಿಳಿವುಗಳ ಹೋಲಿಕೆ  

ಮೂರು ಪ್ರಾಣಿಗಳಿವೆ: ಅವು ನಡೆಯುವಾಗ ಗಂಭೀರತೆಯು ಎದ್ದುಕಾಣುತ್ತದೆ. ನಿಜವಾಗಿಯೂ ನಾಲ್ಕು ಇವೆ:


ಭೂಮಿಯ ಮೇಲೆ ಕೇಡುಮಾಡುವ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ಭೂಮಿಯು ತಾಳಲಾಗದು:


ಯೆಹೋವನು ಈ ಆರು ವಸ್ತುಗಳನ್ನು ದ್ವೇಷಿಸುತ್ತಾನೆ, ಇಲ್ಲ, ಏಳು ವಸ್ತುಗಳನ್ನು ದ್ವೇಷಿಸುತ್ತಾನೆ:


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.


ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


ಯೆಹೂದ್ಯರು, “ಅಬ್ರಹಾಮನೇ ನಮ್ಮ ತಂದೆ” ಎಂದು ಹೇಳಿದರು. ಯೇಸು, “ನೀವು ನಿಜವಾಗಿಯೂ ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದ ಕಾರ್ಯಗಳನ್ನೇ ಮಾಡುತ್ತಿದ್ದಿರಿ.


ನಿಮ್ಮ ಪಿತೃಗಳು ಪ್ರಾರಂಭಿಸಿದ ಆ ಪಾಪವನ್ನು ನೀವು ಪೂರ್ತಿಮಾಡುವಿರಿ!


ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.


ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.


ಯೆಹೋವನು ಹೇಳುವುದೇನೆಂದರೆ, “ಮೋವಾಬ್ಯರು ಅನೇಕ ಅಪರಾಧಗಳನ್ನು ಮಾಡಿದ್ದರಿಂದ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಎದೋಮ್ಯರ ಅರಸನ ಎಲುಬುಗಳನ್ನು ಮೋವಾಬ್ಯರು ಸುಟ್ಟು ಸುಣ್ಣವಾಗಿ ಮಾಡಿದರು.


ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದುಹರಿದು ಹಾಕಿತು.


ಭೂಮಿಯ ಮೇಲೆ ನಾಲ್ಕು ಪ್ರಾಣಿಗಳಿವೆ. ಆದರೆ ಈ ಪ್ರಾಣಿಗಳು ತುಂಬ ವಿವೇಕವುಳ್ಳವುಗಳಾಗಿವೆ.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.


ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.


ಯೆಹೋವನು ಹೇಳುವುದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.


ಅವರು ಅಮಲೇರಿದ ಮೇಲೆ ಸೂಳೆಯರಂತೆ ವರ್ತಿಸುತ್ತಾರೆ. ಅವರು ಲಂಚವನ್ನು ಪ್ರೀತಿಸುತ್ತಾರೆ ಮತ್ತು ಲಂಚಕೊಡುವಂತೆ ಒತ್ತಾಯ ಮಾಡುತ್ತಾರೆ. ಆ ಅಧಿಪತಿಗಳು ತಮ್ಮ ಜನರ ಮೇಲೆ ಅಪಮಾನ ಬರಮಾಡುತ್ತಾರೆ.


“ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ. ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ.


ಮರಣಕ್ಕಾಗಲಿ ಸಮಾಧಿಗಾಗಲಿ ತೃಪ್ತಿಯೇ ಇಲ್ಲ. ಅಂತೆಯೇ ಮನುಷ್ಯನ ಬಯಕೆಗಳಿಗೂ ಕೊನೆಯಿಲ್ಲ.


ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು.


ಮರಣದ ಸ್ಥಳ, ಮಕ್ಕಳಿಲ್ಲದ ಹೆಂಗಸು, ಸತತವಾಗಿ ನೀರಿನ ಅಗತ್ಯವಿರುವ ಭೂಮಿ ಮತ್ತು ಆರದ ಬೆಂಕಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು