Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:19 - ಪರಿಶುದ್ದ ಬೈಬಲ್‌

19 ಆಕಾಶದಲ್ಲಿ ಹಾರುವ ಹದ್ದಿನ ರೀತಿ, ಬಂಡೆಯ ಮೇಲೆ ಹರಿದಾಡುವ ಹಾವು, ಸಮುದ್ರದ ಮೇಲೆ ಸಂಚರಿಸುವ ಹಡಗು ಮತ್ತು ಹೆಂಗಸನ್ನು ಪ್ರೇಮಿಸುತ್ತಿರುವ ಗಂಡಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವು ಯಾವುವೆಂದರೆ: ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಯುವಕ-ಯುವತಿಯರ ಪರಸ್ಪರ ಆಕರ್ಷಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾವವಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ದತಿ, ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಕಾಶದಲ್ಲಿ ಹದ್ದಿನ ಮಾರ್ಗ, ಬಂಡೆಯ ಮೇಲೆ ಸರ್ಪದ ಮಾರ್ಗ, ಸಮುದ್ರ ನಡುವೆ ಹಡಗಿನ ಮಾರ್ಗ, ಯುವಕ ಯುವತಿಯರ ಪ್ರೀತಿ ಮಾರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:19
7 ತಿಳಿವುಗಳ ಹೋಲಿಕೆ  

ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿಹೋಗುವುದಿಲ್ಲ.


ನೀನು ಹದ್ದಿಗೆ ಹಾರಿಹೋಗಿ ಎತ್ತರವಾದ ಬೆಟ್ಟಗಳ ಮೇಲೆ ಗೂಡನ್ನು ಕಟ್ಟಿಕೊಳ್ಳಲು ಆಜ್ಞಾಪಿಸುವೆಯಾ?


“ಒಬ್ಬನು ಕನ್ನಿಕೆಯನ್ನು ಮರುಳುಗೊಳಿಸಿ ಕೂಡಿದರೆ, ಅವನು ಅವಳನ್ನು ಮದುವೆಯಾಗಬೇಕು. ಅವನು ಆಕೆಯ ತಂದೆಗೆ ತಕ್ಕ ತೆರವನ್ನು ಕೊಡಬೇಕು.


“ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.


ನನಗೆ ಅರ್ಥಮಾಡಿಕೊಳ್ಳಲು ಕಷ್ಟವಾದ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ನಾನು ಅರ್ಥಮಾಡಿಕೊಳ್ಳಲಾರೆ:


ಯೆಹೋವನು ಹೀಗೆನ್ನುತ್ತಾನೆ: “ನೋಡಿ, ಒಂದು ರಣಹದ್ದು ಆಕಾಶದಿಂದ ಎರಗುತ್ತಿದೆ. ಅದು ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಹರಡುತ್ತಿದೆ.


ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಹರಡುವ ರಣಹದ್ದಿನಂತಿದ್ದಾನೆ. ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು