ಜ್ಞಾನೋಕ್ತಿಗಳು 30:20 - ಪರಿಶುದ್ದ ಬೈಬಲ್20 ವ್ಯಭಿಚಾರಿಣಿಯ ನಡತೆಯು ಇದೇ. ಆಕೆ ಊಟ ಮಾಡುವಳು, ಬಾಯಿ ಒರಸಿಕೊಳ್ಳುವಳು ಮತ್ತು ತಾನು ಯಾವ ತಪ್ಪನ್ನೂ ಮಾಡಿಲ್ಲವೆಂದು ಹೇಳುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ವ್ಯಭಿಚಾರಿಣಿಯ ವರ್ತನೆ ಹೀಗಿದೆ: ಅವಳು ಉಣ್ಣುತ್ತಾಳೆ, ಬಾಯಿ ಒರೆಸಿಕೊಳ್ಳುತ್ತಾಳೆ. ಬಳಿಕ ‘ನಾನು ತಪ್ಪುಮಾಡಲಿಲ್ಲವಲ್ಲಾ’ ಎನ್ನುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಜಾರಳ ನಡತೆಯು ಹೀಗೆಯೇ ಸರಿ; ಅವಳು ತಿಂದು ಬಾಯಿ ಒರಿಸಿಕೊಂಡು ನಾನು ತಪ್ಪುಮಾಡಲಿಲ್ಲವಲ್ಲವೆ, ಅಂದುಕೊಳ್ಳುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಜಾರಸ್ತ್ರೀಯ ನಡತೆಯು ಹೀಗಿದೆ: ಅವಳು ತಿಂದು, ತನ್ನ ಬಾಯನ್ನು ಒರೆಸಿಕೊಂಡು ‘ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಹೇಳುತ್ತಾಳೆ. ಅಧ್ಯಾಯವನ್ನು ನೋಡಿ |