ಜ್ಞಾನೋಕ್ತಿಗಳು 30:3 - ಪರಿಶುದ್ದ ಬೈಬಲ್3 ನಾನು ಜ್ಞಾನವನ್ನು ಕಲಿತವನಲ್ಲ; ಪರಿಶುದ್ಧನಾದ ದೇವರ ಬಗ್ಗೆಯೂ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳಿವಳಿಕೆಯನ್ನು ಹೊಂದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಜ್ಞಾನವನ್ನು ನಾನು ಪಡೆದುಕೊಂಡಿಲ್ಲ; ಪರಮಪಾವನರ ತಿಳುವಳಿಕೆ ನನಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳುವಳಿಕೆಯನ್ನು ಹೊಂದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಜ್ಞಾನವನ್ನು ಕಲಿತುಕೊಂಡಿಲ್ಲ; ಅಲ್ಲದೆ ಪರಿಶುದ್ಧ ದೇವರ ಅರಿವು ನನಗಿಲ್ಲ. ಅಧ್ಯಾಯವನ್ನು ನೋಡಿ |
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.