Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:7 - ಪರಿಶುದ್ದ ಬೈಬಲ್‌

7 ಯೆಹೋವನೇ, ನಾನು ಸಾಯುವ ಮೊದಲು ನೀನು ನನಗೋಸ್ಕರ ಎರಡು ಕಾರ್ಯಗಳನ್ನು ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ: ನಿರಾಕರಿಸಬೇಡ, ನಾನು ಸಾಯುವುದರೊಳಗೆ ಅವುಗಳನ್ನು ಅನುಗ್ರಹಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ; ಅನುಗ್ರಹಿಸದಿರಬೇಡ, ನಾನು ಸಾಯುವದರೊಳಗಾಗಿ ಅವುಗಳನ್ನು ಕೈಗೂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಯೆಹೋವ ದೇವರೇ, ನಾನು ನಿಮ್ಮನ್ನು ಎರಡು ವಿಷಯಗಳನ್ನು ಕೇಳುತ್ತೇನೆ. ನಿರಾಕರಿಸಬೇಡಿ ನಾನು ಸಾಯುವ ಮೊದಲು ಅವೆರಡನ್ನು ಅನುಗ್ರಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:7
7 ತಿಳಿವುಗಳ ಹೋಲಿಕೆ  

ಒಂದೇ ಒಂದು ಮುಖ್ಯವಾದದ್ದು. ಮರಿಯಳು ಮಾಡಿದ ಆಯ್ಕೆ ಸರಿಯಾದದ್ದು. ಆಕೆಯಿಂದ ಅದು ಎಂದಿಗೂ ತೆಗೆಯಲ್ಪಡುವುದಿಲ್ಲ” ಎಂದನು.


ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ.


ಅವರು ನದಿಯನ್ನು ದಾಟಿದ ಮೇಲೆ ಎಲೀಯನು ಎಲೀಷನಿಗೆ, “ದೇವರು ನನ್ನನ್ನು ನಿನ್ನಿಂದ ತೆಗೆದುಕೊಳ್ಳುವುದಕ್ಕೆ ಮುಂಚೆ, ನಾನು ನಿನಗೆ ಏನು ಮಾಡಬೇಕೆಂದು ನೀನು ಅಪೇಕ್ಷಿಸುವೆ?” ಎಂದು ಕೇಳಿದನು. ಎಲೀಷನು, “ನಿನ್ನ ಆತ್ಮವು ನನ್ನ ಮೇಲೆ ಎರಡರಷ್ಟಿರಬೇಕೆಂದು ನಾನು ನಿನ್ನಲ್ಲಿ ಬೇಡುತ್ತೇನೆ” ಎಂದು ಹೇಳಿದನು.


ರಾಜನು ನಿನ್ನಲ್ಲಿ ಪ್ರಾರ್ಥಿಸಿದಾಗ ನೀನು ಅವನ ಕೋರಿಕೆಗಳನ್ನೆಲ್ಲಾ ಈಡೇರಿಸಿದೆ.


ಆದ್ದರಿಂದ ದೇವರು ಹೇಳುವ ಸಂಗತಿಗಳಿಗೆ ಏನನ್ನೂ ಸೇರಿಸಬೇಡ. ನೀನು ಬದಲಾಯಿಸಿದರೆ, ಆತನು ನಿನ್ನನ್ನು ಶಿಕ್ಷಿಸುವನು ಮತ್ತು ನಿನ್ನನ್ನು ಸುಳ್ಳುಗಾರನೆಂದು ರುಜುವಾತು ಮಾಡುವನು.


ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು