ಜ್ಞಾನೋಕ್ತಿಗಳು 30:9 - ಪರಿಶುದ್ದ ಬೈಬಲ್9 ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹಾಗಾಗದೆ ಹೊಟ್ಟೆತುಂಬಿದವನಾದರೆ ಯೆಹೋವನು ಯಾರೋ ಎಂದು ನಿನ್ನನ್ನು ತಿರಸ್ಕರಿಸೇನು; ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೇನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು. ಅಧ್ಯಾಯವನ್ನು ನೋಡಿ |
ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.
ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?
ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.