ಜ್ಞಾನೋಕ್ತಿಗಳು 31:2 - ಪರಿಶುದ್ದ ಬೈಬಲ್2 ನೀನು ನನ್ನ ಮಗನು: ನನ್ನ ಪ್ರಿಯ ಮಗನು: ನಾನು ಪ್ರಾರ್ಥಿಸಿ ಪಡೆದುಕೊಂಡ ಮಗನು ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಏನು, ಕಂದಾ? ನನ್ನ ಗರ್ಭಪುತ್ರನೇ, ಏನು, ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮಗನೇ, ನನ್ನ ಕರುಳಿನ ಕುಡಿಯೇ, ನನ್ನ ಹರಕೆಯ ಮಗನೇ, ನಾನು ಹೇಳುವುದನ್ನು ಕೇಳು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಏನು, ಕಂದಾ! ನನ್ನ ಗರ್ಭಪುತ್ರನೇ, ಏನು! ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ಮಗನೇ ಕೇಳು, ನನ್ನ ಗರ್ಭಪುತ್ರನೇ ಕೇಳು! ನನ್ನ ಪ್ರಾರ್ಥನೆಗೆ ಉತ್ತರವಾದ ನನ್ನ ಮಗನೇ ಕೇಳು! ಅಧ್ಯಾಯವನ್ನು ನೋಡಿ |
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು