Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:29 - ಪರಿಶುದ್ದ ಬೈಬಲ್‌

29 “ಅನೇಕ ಹೆಂಗಸರು ಮೆಚ್ಚಿಕೆಗೆ ಪಾತ್ರವಾದ ಕಾರ್ಯಗಳನ್ನು ಮಾಡಿದ್ದಾರೆ. ಆದರೆ ನೀನು ಅವರೆಲ್ಲರಿಗಿಂತಲೂ ಅತ್ಯುತ್ತಮಳು” ಎಂದು ಆಕೆಯ ಗಂಡನು ಹೊಗಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಗಂಡನು, “ಗುಣವತಿಯರು ಎಷ್ಟೋಮಂದಿ ಇರುವರು; ಅವರೆಲ್ಲರಿಗಿಂತ ನೀನೆ, ಶ್ರೇಷ್ಠಳು” ಎಂದು ಕೊಂಡಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಪತಿಯು ಸಹ - ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು ಎಂದು ಆಕೆಯನ್ನು ಕೊಂಡಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಬಹುಮಂದಿ ಸ್ತ್ರೀಯರು ಗುಣವತಿಯರಾಗಿದ್ದಾರೆ. ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು,” ಎಂದು ಹೊಗಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:29
6 ತಿಳಿವುಗಳ ಹೋಲಿಕೆ  

ಮಹಿಮಾಪೂರ್ಣಳಾದ ಕನ್ನಿಕೆಯೋ ಎಂಬಂತಿರುವ ಸಭೆಯನ್ನು ತನಗೇ ಕೊಡಬೇಕೆಂದು ಆತನು ಪ್ರಾಣಕೊಟ್ಟನು. ಸಭೆಯು ದೋಷವಿಲ್ಲದೆ ಶುದ್ಧವಾಗಿರಬೇಕೆಂದು ಮತ್ತು ದುಷ್ಟತ್ವವಾಗಲಿ ಪಾಪವಾಗಲಿ ಅಥವಾ ಬೇರೆ ಯಾವುದೇ ತಪ್ಪಾಗಲಿ ಸಭೆಯಲ್ಲಿರಕೂಡದೆಂದು ಆತನು ಪ್ರಾಣಕೊಟ್ಟನು.


ಮಕ್ಕಳು ಎದ್ದುನಿಂತು ಆಕೆಯನ್ನು ಅಭಿನಂದಿಸುವರು. ಗಂಡನು ಅವಳನ್ನು ಹೊಗಳುವನು.


ಲಾವಣ್ಯ ನಿನ್ನನ್ನು ಮೋಸಗೊಳಿಸಬಲ್ಲದು; ಸೌಂದರ್ಯ ತಾತ್ಕಾಲಿಕವಾದದ್ದು. ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳ ಹೆಂಗಸೇ, ಹೊಗಳಿಕೆಗೆ ಪಾತ್ರಳು.


ತರುಣಿಯೇ, ಹೆದರಬೇಡ, ನಿನ್ನ ಇಚ್ಛೆಯನ್ನು ನೆರವೇರಿಸುತ್ತೇನೆ. ನೀನು ಒಳ್ಳೆಯ ಸ್ತ್ರೀ ಎಂಬುದು ನಮ್ಮ ಪಟ್ಟಣದವರಿಗೆಲ್ಲಾ ಗೊತ್ತಿದೆ.


ಗುಣವಂತಳಾದ ಹೆಂಡತಿಯು ಗಂಡನಿಗೆ ಕಿರೀಟದಂತಿರುವಳು; ಗಂಡನನ್ನು ನಾಚಿಕೆಗೆ ಗುರಿಮಾಡುವ ಹೆಂಡತಿಯು ಗಂಡನ ಎಲುಬಿಗೆ ಕ್ಷಯದಂತಿರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು