ಜ್ಞಾನೋಕ್ತಿಗಳು 31:30 - ಪರಿಶುದ್ದ ಬೈಬಲ್30 ಲಾವಣ್ಯ ನಿನ್ನನ್ನು ಮೋಸಗೊಳಿಸಬಲ್ಲದು; ಸೌಂದರ್ಯ ತಾತ್ಕಾಲಿಕವಾದದ್ದು. ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳ ಹೆಂಗಸೇ, ಹೊಗಳಿಕೆಗೆ ಪಾತ್ರಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಕರ್ಷಣೆ ನೆಚ್ಚತಕ್ಕದಲ್ಲ. ಅಲಂಕಾರ ನೆಲೆಯಾದುದಲ್ಲ; ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವಳೆ ಸ್ತುತ್ಯಾರ್ಹಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ; ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ. ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.