ಜ್ಞಾನೋಕ್ತಿಗಳು 31:4 - ಪರಿಶುದ್ದ ಬೈಬಲ್4 ಲೆಮೂವೇಲನೇ, ರಾಜರುಗಳು ಮದ್ಯವನ್ನು ಕುಡಿಯುವುದು ಒಳ್ಳೆಯದಲ್ಲ. ಮದ್ಯಪಾನ ಆಳುವವರಿಗೆ ಒಳ್ಳೆಯದಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕುಡುಕತನ ರಾಜನಿಗೆ ತಕ್ಕುದ್ದಲ್ಲ; ಲೆಮೂವೇಲನೇ ಕೇಳು, ಅದು ರಾಜನಿಗೆ ಯೋಗ್ಯವಲ್ಲ; ಮದ್ಯಪಾನಾಸಕ್ತಿ ಅಧಿಕಾರಿಗಳಿಗೆ ಹಿತವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದ್ರಾಕ್ಷಾರಸವನ್ನು ಕುಡಿಯುವದು ರಾಜರಿಗೆ ಯೋಗ್ಯವಲ್ಲ; ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ; ಮದ್ಯವೆಲ್ಲಿ ಎನ್ನುವದು ಪ್ರಭುಗಳಿಗೆ ವಿಹಿತವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ; ಅಧ್ಯಾಯವನ್ನು ನೋಡಿ |
ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.
ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.