Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:6 - ಪರಿಶುದ್ದ ಬೈಬಲ್‌

6 ಸಾಯುವವರಿಗೆ ಮದ್ಯವನ್ನು ಕೊಡು. ವ್ಯಥೆಯಲ್ಲಿರುವವರಿಗೆ ಮದ್ಯವನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಾರಾಯಿ ಸಾಯುತ್ತಿರುವವನಿಗಿರಲಿ; ಮದ್ಯ, ಮನೋವ್ಯಥೆಪಡುವವನಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮದ್ಯವನ್ನು ಗತಿಯಿಲ್ಲದವನಿಗೂ ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾಶವಾಗುವವರಿಗೆ ಮದ್ಯಪಾನವಿರಲಿ. ಮನೋವ್ಯಥೆಪಡುವವರಿಗೆ ಮದ್ಯವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:6
9 ತಿಳಿವುಗಳ ಹೋಲಿಕೆ  

ತಿಮೊಥೆಯನೇ, ನೀನು ನೀರನ್ನು ಮಾತ್ರ ಕುಡಿಯದೆ ಸ್ವಲ್ಪ ದ್ರಾಕ್ಷಾರಸವನ್ನು ಸಹ ಕುಡಿಯಬೇಕು. ಇದರಿಂದ ನಿನ್ನ ಜೀರ್ಣಶಕ್ತಿಯು ಹೆಚ್ಚುವುದರಿಂದ ಪದೇಪದೇ ಅಸ್ವಸ್ಥನಾಗುವುದಿಲ್ಲ.


ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.


ಹನ್ನಳು ಬಹು ದುಃಖಿತಳಾಗಿದ್ದುದರಿಂದ ಕಣ್ಣೀರು ಸುರಿಯುತ್ತಿತ್ತು. ಅವಳು ಯೆಹೋವನಿಗೆ ಪ್ರಾರ್ಥಿಸುತ್ತಿದ್ದಳು.


ಜನರು ತಮ್ಮ ಸಾವಿನ ಗಳಿಗೆಯಲ್ಲೂ ನನ್ನನ್ನು ಆಶೀರ್ವದಿಸಿದರು. ಕಷ್ಟದಲ್ಲಿದ್ದ ವಿಧವೆಯರಿಗೆ ನನ್ನಿಂದ ಆನಂದವಾಯಿತು.


“ಬಹು ವ್ಯಥೆಯಿಂದ ಸಂಕಟಪಡುತ್ತಿರುವವನು ಯಾಕೆ ಜೀವಿಸಬೇಕು? ಮನನೊಂದಿರುವವನಿಗೆ ಜೀವವನ್ನು ಕೊಡುವುದೇಕೆ?


ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.


ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು.


ಆಗ ಅವರು ಕುಡಿದು, ತಮ್ಮ ಬಡತನವನ್ನು ಮರೆತುಬಿಡುವರು, ಅವರು ಕುಡಿದು ತಮ್ಮ ಕಷ್ಟಗಳನ್ನೆಲ್ಲಾ ಮರೆತುಬಿಡುವರು.


ನಾನೇನು ಹೇಳಲಿ? ನನಗೆ ಸಂಭವಿಸಲಿರುವುದನ್ನು ನನ್ನ ಒಡೆಯನು ತಿಳಿಸಿದ್ದಾನೆ. ನನ್ನ ಒಡೆಯನು ಅದನ್ನು ನೆರವೇರಿಸುತ್ತಾನೆ. ನನ್ನ ಆತ್ಮದಲ್ಲಿ ಸಂಕಟಗಳೆಲ್ಲಾ ತುಂಬಿವೆ. ನಾನು ನನ್ನ ಜೀವಮಾನವೆಲ್ಲಾ ದೀನನಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು