Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:9 - ಪರಿಶುದ್ದ ಬೈಬಲ್‌

9 ಸತ್ಯವಾದವುಗಳ ಪರವಾಗಿ ನಿಂತುಕೋ. ಜನರಿಗೆಲ್ಲಾ ನ್ಯಾಯವಾದ ತೀರ್ಪನ್ನು ಮಾಡು. ಬಡಜನರ ಮತ್ತು ಕೊರತೆಯಲ್ಲಿರುವವರ ಹಕ್ಕುಗಳನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಾಯನ್ನು ತೆರೆದು ನ್ಯಾಯವನ್ನು ತೀರಿಸು, ದೀನದರಿದ್ರರ ವ್ಯಾಜ್ಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರ ಪರವಾಗಿ ಮಾತಾಡಿ ನ್ಯಾಯವಾದ ತೀರ್ಪುಕೊಡು; ದೀನದರಿದ್ರರ ಹಕ್ಕು ಬಾಧ್ಯತೆಯನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಾಯಿ ತೆರೆದು ಧರ್ಮವನ್ನು ನಡಿಸು, ದೀನದರಿದ್ರರಿಗೆ ನ್ಯಾಯವನ್ನು ತೀರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರ ಪರವಾಗಿ ಮಾತನಾಡಿ, ನೀತಿನ್ಯಾಯವನ್ನು ಸ್ಥಾಪಿಸು. ಬಡವರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ಹಕ್ಕುಬಾಧ್ಯತೆಯನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:9
30 ತಿಳಿವುಗಳ ಹೋಲಿಕೆ  

ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


“ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.


“ನಿಮ್ಮ ನ್ಯಾಯಗಳನ್ನು ತೀರಿಸುವ, ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.


ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.


ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಬೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ರಾಜನು ಕೆಟ್ಟದ್ದನ್ನು ಸಹಿಸಲಾರನು; ಯಾಕೆಂದರೆ ಒಳ್ಳೆಯದರಿಂದಲೇ ಅವನ ರಾಜ್ಯಕ್ಕೆ ಬಲ.


ಯಾಕೆಂದರೆ ಬೇಡಿಕೊಂಡ ಬಡವರಿಗೆ ಸಹಾಯ ಮಾಡಿದೆನು; ಗತಿಯಿಲ್ಲದ ಅನಾಥರನ್ನು ರಕ್ಷಿಸಿದೆನು.


ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.


ಹೊರತೋರಿಕೆಯ ಆಧಾರದ ಮೇಲೆ ತೀರ್ಪುಮಾಡದೆ ನ್ಯಾಯಾನುಸಾರವಾಗಿ ತೀರ್ಪುಮಾಡಿರಿ” ಎಂದು ಹೇಳಿದನು.


“ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ಯಾವದು ನ್ಯಾಯವೋ ಯಾವುದು ಯೋಗ್ಯವೋ ಅದನ್ನು ಮಾಡಬೇಕು. ನೀವು ಒಬ್ಬರಿಗೊಬ್ಬರು ದಯೆಕರುಣೆಗಳನ್ನು ತೋರಿಸಬೇಕು.


ರಾಜನು ನ್ಯಾಯತೀರ್ಪು ಮಾಡುವಾಗ ತನ್ನ ಕಣ್ಣುಗಳಿಂದ ದುಷ್ಟತನವನ್ನು ಶೋಧಿಸುವನು.


ದಾವೀದನು ಸಮಸ್ತ ಇಸ್ರೇಲರನ್ನು ಆಳಿದನು. ದಾವೀದನು ಜನರಿಗೆ ನ್ಯಾಯವಾದ ಮತ್ತು ಸರಿಯಾದ ತೀರ್ಪುಗಳನ್ನು ಕೊಡುತ್ತಿದ್ದನು.


ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ. ಆದ್ದರಿಂದ ದೇವರು, ಹೌದು, ನಿನ್ನ ದೇವರೇ ನಿನ್ನನ್ನು ನಿನ್ನ ಸಂಗಡಿಗರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದದ ತೈಲದಿಂದ ಅಭಿಷೇಕಿಸಿದ್ದಾನೆ.”


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಯೋನಾತಾನನು ತನ್ನ ತಂದೆಯಾದ ಸೌಲನೊಂದಿಗೆ ಮಾತನಾಡಿದನು. ಯೋನಾತಾನನು ದಾವೀದನ ಬಗ್ಗೆ ಒಳ್ಳೆಯ ಸಂಗತಿಗಳನ್ನು ತಿಳಿಸಿದನು. ಯೋನಾತಾನನು, “ನೀನು ರಾಜ. ದಾವೀದನು ನಿನ್ನ ಸೇವಕ. ದಾವೀದನು ನಿನಗೆ ಯಾವ ಕೇಡನ್ನೂ ಮಾಡಿಲ್ಲ. ಆದ್ದರಿಂದ ಅವನಿಗೆ ಯಾವ ಕೇಡನ್ನೂ ಮಾಡಬೇಡ. ದಾವೀದನು ನಿನಗೆ ಯಾವಾಗಲೂ ಒಳ್ಳೆಯವನಾಗಿಯೇ ಇದ್ದಾನೆ.


ಯೋನಾತಾನನು ತನ್ನ ತಂದೆಗೆ, “ದಾವೀದನನ್ನು ಏಕೆ ಕೊಲ್ಲಬೇಕು? ಅವನು ಮಾಡಿದ ತಪ್ಪಾದರೂ ಏನು?” ಎಂದು ಕೇಳಿದನು.


ನೀತಿವಂತರು ಬಡವರಿಗೆ ಒಳ್ಳೆಯದನ್ನು ಮಾಡಲು ಇಷ್ಟಪಡುತ್ತಾರೆ. ಕೆಡುಕರಾದರೋ ಬಡವರನ್ನು ಲಕ್ಷಿಸುವುದಿಲ್ಲ.


“ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ.


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು