Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:10 - ಪರಿಶುದ್ದ ಬೈಬಲ್‌

10 ಮಗನೇ, ನನ್ನ ಮಾತನ್ನು ಕೇಳು. ನಾನು ಹೇಳಿದಂತೆ ಮಾಡು, ಆಗ ನೀನು ಬಹುಕಾಲ ಬದುಕುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮಗನೇ, ನನ್ನ ಮಾತುಗಳನ್ನು ಆಲಿಸಿ ಕೇಳು; ಕೇಳಿದೆಯಾದರೆ ಹೆಚ್ಚುವುವು ನಿನ್ನ ಜೀವನದ ವರ್ಷಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಂದಾ, ಆಲಿಸಿ ನನ್ನ ಮಾತುಗಳನ್ನು ಕೇಳು; ಕೇಳಿದರೆ, ನಿನ್ನ ಜೀವಮಾನದ ವರುಷಗಳು ಹೆಚ್ಚುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮಗನೇ, ಆಲಿಸಿ ನನ್ನ ಮಾತುಗಳನ್ನು ಸ್ವೀಕರಿಸು, ಆಗ ನಿನ್ನ ಜೀವನದ ವರ್ಷಗಳು ಹೆಚ್ಚುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:10
13 ತಿಳಿವುಗಳ ಹೋಲಿಕೆ  

ನೀವು ದೇವರ ಸಂದೇಶವನ್ನು ಸ್ವೀಕರಿಸಿಕೊಂಡದ್ದಕ್ಕಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಆ ಸಂದೇಶವನ್ನು ನಮ್ಮಿಂದ ಕೇಳಿ, ಅದನ್ನು ದೇವರ ವಾಕ್ಯದಂತೆ ಒಪ್ಪಿಕೊಂಡಿರೇ ಹೊರತು ಮಾನವನ ವಾಕ್ಯಗಳೆಂದಲ್ಲ. ಅದು ನಿಜವಾಗಿಯೂ ದೇವರ ಸಂದೇಶ. ಆ ಸಂದೇಶವು ನಂಬುವವರಾದ ನಿಮ್ಮಲ್ಲಿ ಕಾರ್ಯಮಾಡುತ್ತದೆ.


ಅವು ನಿನಗೆ ದೀರ್ಘಾಯುಷ್ಯವನ್ನು ನೀಡಿ ಸಂತೋಷ ಸಮಾಧಾನಗಳಿಂದ ಕೂಡಿದ ಜೀವಿತವನ್ನು ಕೊಡುತ್ತವೆ.


ನೀವೂ ಮತ್ತು ನಿಮ್ಮ ಸಂತತಿಯವರೂ ಜೀವಿಸುವ ದಿನಗಳಲ್ಲೆಲ್ಲಾ ದೇವರಾದ ಯೆಹೋವನನ್ನು ಗೌರವಿಸಬೇಕು. ನಾನೀಗ ಕೊಡುವ ಎಲ್ಲಾ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸಬೇಕು. ಹಾಗೆ ಮಾಡಿದ್ದಲ್ಲಿ ನೀವು ನೆಲೆಸುವ ಜಾಗದಲ್ಲಿ ನೀವು ಬಹುಕಾಲ ಜೀವಿಸುವಿರಿ.


ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು.


ಜ್ಞಾನವೆಂಬಾಕೆಯ ಬಲಗೈಯಿಂದ ದೀರ್ಘಾಯುಷ್ಯವೂ ಎಡಗೈಯಿಂದ ಐಶ್ವರ್ಯವೂ ಘನತೆಯೂ ಬರುವವು.


ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ನನ್ನ ಉಪದೇಶವನ್ನು ಬೆಳ್ಳಿಗಿಂತಲೂ ನನ್ನ ಜ್ಞಾನೋಪದೇಶವನ್ನು ಶುದ್ಧ ಬಂಗಾರಕ್ಕಿಂತಲೂ ಉತ್ತಮವೆಂದು ಸ್ವೀಕರಿಸಿಕೊಳ್ಳಿ.


ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೊ. ಆಗ ನೀನು ಜ್ಞಾನಿಯಾಗುವೆ.


ನನ್ನ ಮಗನೇ, ನಾನು ಹೇಳುವ ಈ ಮಾತುಗಳನ್ನು ಸ್ವೀಕಾರಮಾಡಿಕೊ. ನನ್ನ ಆಜ್ಞೆಗಳನ್ನು ನೆನಪು ಮಾಡಿಕೊ.


ಆತನ ಉಪದೇಶವನ್ನು ಸ್ವೀಕರಿಸಿಕೊ. ಆತನ ವಾಕ್ಯಗಳನ್ನು ನಿನ್ನ ಹೃದಯದಲ್ಲಿಟ್ಟುಕೊ.


‘ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು.


ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಲ್ಪಟ್ಟ ದೇಶದಲ್ಲಿ ಆಗ ನೀವು ಮತ್ತು ನಿಮ್ಮ ಮಕ್ಕಳು ಬಹುಕಾಲ ಬಾಳುವಿರಿ. ಆಕಾಶವು ಭೂಮಿಯ ಮೇಲೆ ಎಷ್ಟು ಕಾಲವಿರುವುದೋ ಅಷ್ಟುಕಾಲ ನೀವು ಬದುಕುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು