ಜ್ಞಾನೋಕ್ತಿಗಳು 4:13 - ಪರಿಶುದ್ದ ಬೈಬಲ್13 ಈ ಉಪದೇಶಗಳನ್ನು ಯಾವಾಗಲೂ ನೆನಪುಮಾಡಿಕೊ; ಮರೆತುಬಿಡಬೇಡ. ಅವು ನಿನಗೆ ಜೀವವಾಗಿವೆ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸದುಪದೇಶವನ್ನು ಹಿಡಿ, ಸಡಿಲಬಿಡಬೇಡ; ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ. ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.