Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:22 - ಪರಿಶುದ್ದ ಬೈಬಲ್‌

22 ನನ್ನ ಉಪದೇಶಕ್ಕೆ ಕಿವಿಗೊಡುವವರು ಜೀವವನ್ನು ಹೊಂದಿಕೊಳ್ಳುವರು. ನನ್ನ ಮಾತುಗಳು ದೇಹಕ್ಕೆ ಒಳ್ಳೆಯ ಆರೋಗ್ಯವನ್ನು ನೀಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವುಗಳನ್ನು ಹೊಂದುವವರಿಗೆ ಅವು ಜೀವವು, ದೇಹಕ್ಕೆಲ್ಲಾ ಅವೇ ಆರೋಗ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕಂಡುಹಿಡಿಯಬಲ್ಲವನಿಗೆ ಅವು ಜೀವದಾಯಕ; ಇಡೀ ದೇಹಕ್ಕೆ ಅವು ಆರೋಗ್ಯಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವುಗಳನ್ನು ಹೊಂದುವವರಿಗೆ ಅವು ಜೀವವು. ದೇಹಕ್ಕೆಲ್ಲಾ ಅವೇ ಆರೋಗ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಆ ನುಡಿಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ, ದೇಹಕ್ಕೆಲ್ಲಾ ಆರೋಗ್ಯವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:22
8 ತಿಳಿವುಗಳ ಹೋಲಿಕೆ  

ದುಡುಕಿದ ಮಾತು ಖಡ್ಗದಂತೆ ನೋವು ಮಾಡುತ್ತದೆ; ಜ್ಞಾನಿಯ ಮಾತು ಗುಣಪಡಿಸುತ್ತದೆ.


ಮಗನೇ, ನನ್ನ ಮಾತನ್ನು ಕೇಳು. ನಾನು ಹೇಳಿದಂತೆ ಮಾಡು, ಆಗ ನೀನು ಬಹುಕಾಲ ಬದುಕುವೆ.


ನೀನು ಹೀಗೆ ಮಾಡುವುದಾದರೆ, ಅದು ನಿನ್ನ ದೇಹಕ್ಕೆ ಒಳ್ಳೆಯ ಆರೋಗ್ಯವನ್ನೂ ನಿನ್ನ ಎಲುಬುಗಳಿಗೆ ಹೊಸ ಶಕ್ತಿಯನ್ನೂ ಕೊಡುವುದು.


“‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು.


ನನ್ನ ತಂದೆ ನನಗೆ ಉಪದೇಶ ಮಾಡಿದ್ದೇನೆಂದರೆ: “ನನ್ನ ಮಾತುಗಳನ್ನು ನೆನಪುಮಾಡಿಕೊ; ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಬದುಕುವೆ.


ಜ್ಞಾನವಿವೇಕಗಳು ನಿನಗೆ ಜೀವವನ್ನೂ ನಿನ್ನ ಜೀವಿತಕ್ಕೆ ಸೌಂದರ್ಯವನ್ನೂ ನೀಡುತ್ತವೆ.


ನನ್ನನ್ನು ಕಂಡುಕೊಂಡಂಥವನು ಜೀವವನ್ನು ಕಂಡುಕೊಳ್ಳುತ್ತಾನೆ. ಅವನಿಗೆ ಯೆಹೋವನ ಕೃಪೆಯು ದೊರೆಯುತ್ತದೆ.


ಸವಿನುಡಿಗಳು ಜೇನಿನಂತಿವೆ. ಅವು ಸ್ವೀಕಾರಕ್ಕೆ ಸುಲಭ; ಆರೋಗ್ಯಕ್ಕೆ ಉಪಯುಕ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು