ದಾವೀದನು, “ನಾವು ನಮ್ಮ ದೇವರಿಗೆ ಮಹಾದೊಡ್ಡ ಆಲಯವನ್ನು ಕಟ್ಟಿಸಬೇಕು. ಆದರೆ ನನ್ನ ಮಗನಾದ ಸೊಲೊಮೋನನು ಇನ್ನೂ ಎಳೆಪ್ರಾಯದವನು; ಅವನು ಕಲಿಯ ಬೇಕಾದದ್ದು ಇನ್ನೂ ಬೇಕಾದಷ್ಟಿದೆ. ದೇವಾಲಯವು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗಿದ್ದು ಅದರ ಸೌಂದರ್ಯ ಮತ್ತು ವಿನ್ಯಾಸವು ಹೆಸರುವಾಸಿಯಾಗಿರಬೇಕು. ಅದಕ್ಕಾಗಿಯೇ ನಾನು ಆ ದೇವಾಲಯಕ್ಕಾಗಿ ಸಮಸ್ತವನ್ನು ಸಿದ್ಧಪಡಿಸುತ್ತೇನೆ” ಅಂದುಕೊಂಡನು. ಅಲ್ಲದೆ ಅವನು ಸಾಯುವುದಕ್ಕಿಂತ ಮುಂಚೆ ದೇವಾಲಯವನ್ನು ಕಟ್ಟುವುದಕ್ಕೆ ಬೇಕಾಗಿರುವವುಗಳನ್ನೆಲ್ಲಾ ಕೂಡಿಸಿಟ್ಟನು.