ಜ್ಞಾನೋಕ್ತಿಗಳು 4:7 - ಪರಿಶುದ್ದ ಬೈಬಲ್7 “ಜ್ಞಾನವನ್ನು ಪಡೆಯಲು ನೀನು ನಿರ್ಧರಿಸಿದಾಗಲೇ ಜ್ಞಾನವು ನಿನ್ನಲ್ಲಿ ಆರಂಭವಾಗುತ್ತದೆ. ಆದ್ದರಿಂದ ವಿವೇಕವನ್ನು ಪಡೆಯಲು ನಿನಗಿರುವದನ್ನೆಲ್ಲಾ ಉಪಯೋಗಿಸು. ಆಗ ನೀನು ವಿವೇಕಿಯಾಗುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಜ್ಞಾನ ಪಡೆಯಬೇಕೆಂಬುದೇ ಜ್ಞಾನಬೋಧೆಯ ಮೂಲಾಂಶ; ನಿನ್ನ ಸರ್ವಸಂಪತ್ತಿನಿಂದ ವಿವೇಕವನ್ನು ಗಳಿಸಿಕೊ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜ್ಞಾನವನ್ನು ಪಡೆಯಬೇಕೆಂಬದೇ ಜ್ಞಾನಬೋಧೆಯ ಪ್ರಥಮಪಾಠ; ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಜ್ಞಾನವೇ ಮುಖ್ಯವಾದದ್ದು, ಆದ್ದರಿಂದ ಜ್ಞಾನವನ್ನು ಸಂಪಾದಿಸು; ನಿನ್ನಲ್ಲಿರುವ ಎಲ್ಲಾ ಸಂಪತ್ತನ್ನು ವ್ಯಯಮಾಡಿದರೂ ತಿಳುವಳಿಕೆಯನ್ನು ಪಡೆದುಕೋ. ಅಧ್ಯಾಯವನ್ನು ನೋಡಿ |
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.