Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:16 - ಪರಿಶುದ್ದ ಬೈಬಲ್‌

16 ಬೇರೆ ಸ್ತ್ರೀಯರಲ್ಲಿ ನೀನು ಮಕ್ಕಳನ್ನು ಪಡೆಯುವುದು ಒಳ್ಳೆಯದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನ ಒರತೆಗಳು ಬಯಲಿನಲ್ಲಿಯೂ, ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿನ್ನ ಬುಗ್ಗೆ ಹೊರಗೆ ಹೋಗುವುದು ಸರಿಯೇ? ನಿನ್ನ ಕಾಲುವೆ ಬೀದಿಚೌಕಗಳಲ್ಲಿ ಹರಡಿಕೊಳ್ಳುವುದು ಹಿತವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ಒರತೆಗಳು ಬೈಲಿನಲ್ಲಿಯೂ ನಿನ್ನ ಕಾಲುವೆಗಳು ಚೌಕದಲ್ಲಿಯೂ ಹರಡಿ ಹರಿಯುವದು ವಿಹಿತವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿನ್ನ ಬುಗ್ಗೆಗಳು ಬೀದಿಗಳಲ್ಲಿ ಹರಡುವುದು ಯುಕ್ತವೋ? ನೀರಿನ ಒರತೆಗಳು ಬೀದಿಚೌಕಗಳಲ್ಲಿ ಹರಿಯುವುದು ಸರಿಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:16
13 ತಿಳಿವುಗಳ ಹೋಲಿಕೆ  

ಮನೆಯಲ್ಲಿರುವ ನಿನ್ನ ಹೆಂಡತಿ ಫಲಭರಿತವಾದ ದ್ರಾಕ್ಷಿಬಳ್ಳಿಯಂತಿರುವಳು. ಊಟದ ಮೇಜಿನ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ನೀನು ನೆಟ್ಟ ಆಲಿವ್ ಮರಗಳಂತಿರುವರು.


ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.


ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.


ಮಹಾಸಭೆಯಲ್ಲಿ ದೇವರಿಗೆ ಸ್ತೋತ್ರವಾಗಲಿ! ಇಸ್ರೇಲ್ ಜನರೇ, ಯೆಹೋವನಿಗೆ ಸ್ತೋತ್ರಮಾಡಿರಿ!


ಇಬ್ಜಾನನಿಗೆ ಮೂವತ್ತು ಗಂಡುಮಕ್ಕಳು ಮತ್ತು ಮೂವತ್ತು ಹೆಣ್ಣುಮಕ್ಕಳು ಇದ್ದರು. ಅವನು ತನ್ನ ಮೂವತ್ತು ಹೆಣ್ಣುಮಕ್ಕಳಿಗೆ ತನ್ನ ರಕ್ತಸಂಬಂಧಿ ಅಲ್ಲದವರೊಂದಿಗೆ ಮದುವೆಯಾಗಬೇಕೆಂದು ಹೇಳಿದನು. ಅವನು ತನ್ನ ಸಂಬಂಧಿಗಳಲ್ಲದ ಮೂವತ್ತು ಕನ್ಯೆಯರನ್ನು ಹುಡುಕಿ ತನ್ನ ಗಂಡುಮಕ್ಕಳಿಗೆ ಅವರನ್ನು ಮದುವೆಮಾಡಿಸಿದನು. ಇಬ್ಜಾನನು ಏಳು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.


ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.


ಅವರು ಹೊರಡಲು ಸಿದ್ಧರಾಗಿದ್ದಾಗ ಅವರು ರೆಬೆಕ್ಕಳಿಗೆ, “ನಮ್ಮ ತಂಗಿಯೇ, ನೀನು ಕೋಟ್ಯಾನುಕೋಟಿ ಜನರ ತಾಯಿಯಾಗು. ನಿನ್ನ ಸಂತತಿಗಳವರು ತಮ್ಮ ಶತ್ರುಗಳನ್ನು ಸೋಲಿಸಿ ಅವರ ನಗರಗಳನ್ನು ವಶಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.


ನಿನ್ನ ಸ್ವಂತ ಹೆಂಡತಿಗೆ ನಂಬಿಗಸ್ತನಾಗಿರು; ನಿನ್ನ ಪ್ರೀತಿಯು ಆಕೆಗೆ ಮಾತ್ರ ಸಲ್ಲಲಿ.


ನಿನ್ನ ಮಕ್ಕಳು ನಿನ್ನವರೇ ಆಗಿರಲಿ; ಪರರು ನಿನ್ನೊಂದಿಗೆ ಪಾಲುಗಾರರಾಗದಿರಲಿ.


ಆದ್ದರಿಂದ ಯೌವನಪ್ರಾಯದಲ್ಲಿ ನೀನು ಮದುವೆಮಾಡಿಕೊಂಡ ಸ್ತ್ರೀಯೊಡನೆ ಸಂತೋಷಿಸು.


“ನೀವು ಕದ್ದ ನೀರು ಸ್ವಂತ ನೀರಿಗಿಂತಲೂ ಹೆಚ್ಚು ರುಚಿಯಾಗಿರುವುದು. ನೀವು ಕದ್ದ ರೊಟ್ಟಿ ತಯಾರಿಸಿದ ರೊಟ್ಟಿಗಿಂತಲೂ ಹೆಚ್ಚು ರುಚಿಯಾಗಿರುವುದು” ಎಂದು ಹೇಳುವಳು.


ನನ್ನ ಪ್ರಿಯಳೇ, ನನ್ನ ವಧುವೇ, ನೀನು ಕದಹಾಕಿದ ತೋಟದಂತಿರುವೆ; ಬೇಲಿಯೊಳಗಿರುವ ಬುಗ್ಗೆಯಂತಿರುವೆ; ಮುಚ್ಚಿ ಮುದ್ರಿಸಿದ ಚಿಲುಮೆಯಂತಿರುವೆ.


ನೀನು ತೋಟದ ಬುಗ್ಗೆಯಂತಿರುವೆ; ಹೊಸ ನೀರಿನ ಬಾವಿಯಂತಿರುವೆ; ಲೆಬನೋನಿನ ಬೆಟ್ಟಗಳಿಂದ ಹರಿದುಬರುತ್ತಿರುವ ನೀರಿನಂತಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು