Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:2 - ಪರಿಶುದ್ದ ಬೈಬಲ್‌

2 ಆಗ ನೀನು ಯೋಗ್ಯವಾಗಿ ನಡೆದುಕೊಳ್ಳುವೆ; ತಿಳುವಳಿಕೆಯಿಂದ ಮಾತಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ನೀನು ವಿವೇಕಶೀಲನಾಗುವೆ; ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಯ್ದುಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೀಗಾದರೆ ನೀನು ಸುಬುದ್ಧಿಯನ್ನು ಕೈಗೊಳ್ಳುವಿ, ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ನಿನ್ನ ವಿವೇಚನೆಯನ್ನು ಉಳಿಸಿಕೊಳ್ಳುವೆ. ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:2
11 ತಿಳಿವುಗಳ ಹೋಲಿಕೆ  

ಜ್ಞಾನಿಯ ಹೃದಯವು ಅವನ ಬಾಯಿಗೆ ಮಾರ್ಗದರ್ಶನ. ಅವನ ಮಾತುಗಳು ಒಳ್ಳೆಯದಾಗಿವೆ; ಕೇಳಲು ಯೋಗ್ಯವಾಗಿವೆ.


ಜ್ಞಾನಿಯ ಮಾತುಗಳು ತಿಳುವಳಿಕೆಯನ್ನು ಹರಡುತ್ತವೆ. ಮೂಢರ ಮಾತುಗಳು ಕೇಳಲು ಯೋಗ್ಯವಲ್ಲ.


ನನ್ನ ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯೊಳಗಿವೆ. ನಿನ್ನ ಬಟ್ಟೆಗಳು ಪರಿಮಳದ್ರವ್ಯದಂತೆ ಸುವಾಸನೆಭರಿತವಾಗಿವೆ.


ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು.


ಒಳ್ಳೆಯವನ ಮಾತುಗಳು ಅನೇಕರಿಗೆ ಸಹಾಯಮಾಡುತ್ತವೆ. ಮೂಢನ ಮೂಢತನವಾದರೋ ಅನೇಕರನ್ನು ಕೊಲ್ಲುವುದು.


ನನ್ನ ತುಟಿಗಳು ನಿನ್ನ ಜ್ಞಾನದ ನಿರ್ಧಾರಗಳ ಕುರಿತು ವರ್ಣಿಸುತ್ತವೆ.


ನಿನ್ನ ಒಳ್ಳೆಯತನವನ್ನೂ ರಕ್ಷಣೆಯನ್ನೂ ನಾನು ಹಗಲೆಲ್ಲಾ ಹೇಳುತ್ತಲೇ ಇರುವೆನು. ಅವು ವರ್ಣಿಸಲಸಾಧ್ಯವಾಗಿವೆ.


ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ. ನಿನ್ನ ಮಾತುಗಳು ಮನೋಹರವಾಗಿವೆ. ದೇವರ ಆಶೀರ್ವಾದವು ನಿನ್ನ ಮೇಲೆ ಸದಾಕಾಲವಿರುವುದು.


ಬಂಗಾರಕ್ಕಿಂತಲೂ ಮಾಣಿಕ್ಯದ ಸಮೃದ್ಧಿಗಿಂತಲೂ ಜ್ಞಾನದ ಮಾತುಗಳನ್ನಾಡುವ ತುಟಿಗಳು ಅಮೂಲ್ಯವಾಗಿವೆ.


ನನ್ನ ಮಗನೇ, ಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ. ನಿನ್ನ ದೃಷ್ಟಿಯು ಅವುಗಳ ಮೇಲೇ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು