Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:23 - ಪರಿಶುದ್ದ ಬೈಬಲ್‌

23 ಅವನು ಬುದ್ಧಿವಾದವನ್ನು ತಿರಸ್ಕರಿಸಿದ್ದರಿಂದ ಸಾಯುವನು; ತನ್ನ ಅತಿಮೂರ್ಖತನದಿಂದ ದಾರಿತಪ್ಪುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು ಶಿಸ್ತುಪಾಲನೆಯಿಲ್ಲದೆ ನಾಶವಾಗುತ್ತಾನೆ; ಅತಿ ಮೂರ್ಖತನದಿಂದಲೇ ಮೋಸಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸದುಪದೇಶದ ಕೊರತೆಯಿಂದಲೇ ಸಾಯುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಶಿಸ್ತುಪಾಲನೆಯಿಲ್ಲದೆ ಅವನು ನಾಶವಾಗುವನು; ತನ್ನ ಅತಿಮೂರ್ಖತನದಿಂದಲೇ ತಪ್ಪಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:23
11 ತಿಳಿವುಗಳ ಹೋಲಿಕೆ  

ಆದರೆ ಅವರು ದೇವರಿಗೆ ವಿಧೇಯರಾಗದಿದ್ದರೆ ನಾಶವಾಗುವರು; ಮೂಢರಂತೆ ಸಾಯುವರು.


ಅವರ ಗುಡಾರಗಳ ಹಗ್ಗಗಳು ಬಿಚ್ಚಲ್ಪಡುವವು, ಅವರು ಜ್ಞಾನವಿಲ್ಲದವರಾಗಿ ಸತ್ತುಹೋಗುವರು.’”


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


ಒಳ್ಳೆಯವನ ಮಾತುಗಳು ಅನೇಕರಿಗೆ ಸಹಾಯಮಾಡುತ್ತವೆ. ಮೂಢನ ಮೂಢತನವಾದರೋ ಅನೇಕರನ್ನು ಕೊಲ್ಲುವುದು.


ದುಷ್ಟರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ಸಂಪೂರ್ಣವಾಗಿ ದಂಡನೆ ಅನುಭವಿಸುವರು. ಆದರೆ ಸಜ್ಜನರು ತಮ್ಮ ಒಳ್ಳೆಯಕಾರ್ಯಗಳಿಗೆ ಸಂಪೂರ್ಣವಾಗಿ ಪ್ರತಿಫಲ ಪಡೆಯುವರು.


ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ. ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.


ಆದ್ದರಿಂದ ನೀವು ನಿಮ್ಮ ದುರ್ನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.


ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು.


ಜನರು ಜ್ಞಾನಿಗಳನ್ನು ಹೊಗಳುವರು; ಮೂಢನನ್ನು ಕಡೆಗಣಿಸುವರು.


ಜ್ಞಾನದ ಮಾರ್ಗವನ್ನು ತೊರೆದವನು ನಾಶನದ ಕಡೆಗೆ ಹೋಗುತ್ತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು