Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:11 - ಪರಿಶುದ್ದ ಬೈಬಲ್‌

11 ಆದರೆ ಅವನು ನಿದ್ರಿಸುತ್ತಲೇ ಇರುವನು; ಬಡವನಾಗುತ್ತಲೇ ಹೋಗುವನು. ಅವನ ಸ್ಥಿತಿಯು ದರೋಡೆಕೋರರು ಬಂದು ಇದ್ದದ್ದನ್ನೆಲ್ಲಾ ದೋಚಿಕೊಂಡು ಹೋದಂತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಡತನ ನಿನ್ನ ಮೇಲೆರಗುವುದು ದಾರಿಗಳ್ಳನಂತೆ; ಅಭಾವ ನಿನ್ನ ಮೇಲೆ ಬೀಳುವುದು ಪಂಜುಗಳ್ಳನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೀಗೆ ನಿನಗೆ ಬಡತನವು ಕಳ್ಳನಂತೆಯೂ ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:11
9 ತಿಳಿವುಗಳ ಹೋಲಿಕೆ  

ಸೋಮಾರಿಯ ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವನು ತನ್ನ ಆಸೆಗಳನ್ನು ಈಡೇರಿಸಿಕೊಳ್ಳುವನು.


ಇವು ನಿನ್ನನ್ನು ಬೇಗನೆ ಬಡವನನ್ನಾಗಿ ಮಾಡಿ ಬರಿದು ಮಾಡುತ್ತದೆ; ಇದ್ದಕ್ಕಿದ್ದಂತೆ ಬಂದು ಎಲ್ಲವನ್ನು ದೋಚಿಕೊಂಡು ಹೋಗುವ ಕಳ್ಳನಂತಿವೆ.


ಸೋಮಾರಿಯು ಬಿತ್ತನೆಕಾಲದಲ್ಲಿ ಬೀಜ ಬಿತ್ತುವುದಿಲ್ಲ; ಸುಗ್ಗಿಕಾಲದಲ್ಲಿ ಅವನಿಗೆ ಬೆಳೆಯೂ ಇರುವುದಿಲ್ಲ.


ಸೋಮಾರಿಯು ಬಡವನಾಗಿರುತ್ತಾನೆ. ಕಷ್ಟಪಟ್ಟು ಕೆಲಸ ಮಾಡುವವನು ಐಶ್ವರ್ಯವಂತನಾಗುತ್ತಾನೆ.


ಕುಡುಕರೂ ಹೊಟ್ಟೆಬಾಕರೂ ಬಡವರಾಗುವರು. ತಿಂದು ಕುಡಿದು ನಿದ್ರಿಸುವುದೇ ಅವರ ಕಾರ್ಯಗಳು. ಅವರು ಬಹು ಬೇಗನೆ ಬಡವರಾಗುವರು.


ಸೋಮಾರಿಗೆ ಗಾಢವಾದ ನಿದ್ರೆ. ಮೈಗಳ್ಳನಿಗೆ ಹಸಿವೆ.


ನಿದ್ರಾನಿರತನಾಗಿರಬೇಡ, ಬಡವನಾಗುವೆ. ನಿನ್ನ ಸಮಯವನ್ನು ದುಡಿಯಲು ಉಪಯೋಗಿಸಿಕೊಂಡರೆ ನಿನಗೆ ಊಟಕ್ಕೆ ಬೇಕಾದಷ್ಟಿರುವುದು.


ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ವಿಶ್ರಾಂತಿ, ಇನ್ನು ಸ್ವಲ್ಪ ಕೈಮುದುರಿಕೊಳ್ಳುವೆ, ಮಧ್ಯಾಹ್ನ ಇನ್ನು ಸ್ವಲ್ಪ ನಿದ್ರೆ ಮಾಡುವೆ ಎನ್ನುವೆಯಾ?


ಕೆಲವರು ಹೇಳುವಂತೆ, “ಏನೂ ಮಾಡದೆ ಕೈಕಟ್ಟಿಕೊಂಡು ಕುಳಿತುಕೊಳ್ಳುವುದು ಮೂಢತನ. ದುಡಿಯದವನು ಹಸಿವೆಯಿಂದ ಸಾಯುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು