ಜ್ಞಾನೋಕ್ತಿಗಳು 6:12 - ಪರಿಶುದ್ದ ಬೈಬಲ್12 ಕೆಡುಕನೂ ನೀಚನೂ ಆಗಿರುವವನು ಸುಳ್ಳಾಡುತ್ತಾ ಅಡ್ಡಾಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು, ಅವನು ವಕ್ರ ಮಾತಿನವನಾಗಿದ್ದಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ದುರುಳನೂ ನೀಚನೂ ಆದವನ ನಡತೆಯನ್ನು ನೋಡು: ಅವನ ಬಾಯಿಂದ ಹೊರಡುವುದು ಕುಟಿಲ ಮಾತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀಚನೂ ದುಷ್ಟನೂ ಆಗಿರುವ ಅವನ ನಡತೆಯನ್ನು ನೋಡು; ಸೊಟ್ಟು ಬಾಯಿಯವನಾಗಿದ್ದಾನೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತೊಂದರೆಕೊಡುವವನೂ ಕೆಡುಕನೂ ಆಗಿರುವವನ ಬಾಯಿಂದ ಕುಟಿಲ ಮಾತೇ ಬರುವುದು. ಅಧ್ಯಾಯವನ್ನು ನೋಡಿ |
ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.