Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:20 - ಪರಿಶುದ್ದ ಬೈಬಲ್‌

20 ನನ್ನ ಮಗನೇ, ನಿನ್ನ ತಂದೆಯ ಆಜ್ಞೆಗಳನ್ನು ಜ್ಞಾಪಕಮಾಡಿಕೋ. ನಿನ್ನ ತಾಯಿಯ ಉಪದೇಶಗಳನ್ನು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮಗನೇ, ನಿನ್ನ ತಂದೆಯ ಆಜ್ಞೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಗೊಳ್ಳು, ನಿನ್ನ ತಾಯಿಯ ಬೋಧನೆಯನ್ನು ತ್ಯಜಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:20
11 ತಿಳಿವುಗಳ ಹೋಲಿಕೆ  

ಮಕ್ಕಳೇ, ಪ್ರಭುವಿನ ಚಿತ್ತಕ್ಕನುಸಾರವಾಗಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಅದು ನ್ಯಾಯಬದ್ಧವಾದದ್ದಾಗಿದೆ.


“ಲೇವಿಯರು, ‘ತಂದೆತಾಯಿಗಳನ್ನು ಸನ್ಮಾನಿಸದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ನಿನ್ನ ತಂದೆಗೆ ಕಿವಿಗೊಡು. ಯಾಕೆಂದರೆ ನೀನು ಅವನ ಮಗನು. ಅವನು ನಿನ್ನ ತಂದೆ. ನಿನ್ನ ತಾಯಿ ವೃದ್ಧಳಾಗಿರುವಾಗಲೂ ಆಕೆಯನ್ನು ಗೌರವಿಸು.


ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ.


“ಒಬ್ಬ ಮನುಷ್ಯನಿಗೆ ಹಠಮಾರಿಯಾದ ಅವಿಧೇಯ ಮಗನಿರಬಹುದು. ಈ ಮಗನು ತಂದೆಯ ಮಾತನ್ನಾಗಲಿ ತಾಯಿಯ ಮಾತನ್ನಾಗಲಿ ಕೇಳದವನಾಗಿದ್ದರೆ ಅವನಿಗೆ ಅವರು ಶಿಕ್ಷೆ ಕೊಟ್ಟರೂ ಅವನು ಅವರಿಗೆ ವಿಧೇಯನಾಗದಿದ್ದರೆ, ಅವರ ಮಾತುಗಳನ್ನು ಕೇಳದಿದ್ದರೆ,


ಆದ್ದರಿಂದ ರೇಕಾಬ್ಯರಾದ ನಾವು ನಮ್ಮ ಪೂರ್ವಿಕನಾದ ಯೋನಾದಾಬನು ಕೊಟ್ಟ ಆಜ್ಞೆಯನ್ನು ಸಂಪೂರ್ಣವಾಗಿ ಪಾಲಿಸಿದ್ದೇವೆ. ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಹೆಂಡತಿಯರು ಮತ್ತು ಮಕ್ಕಳು ಸಹ ಎಂದೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.


ನನ್ನ ಮಗನೇ, ನನ್ನ ಜ್ಞಾನೋಪದೇಶವನ್ನು ಕೇಳು. ನನ್ನ ವಿವೇಕದ ಮಾತುಗಳಿಗೆ ಗಮನಕೊಡು.


ಆಕೆಯ ಹೆಜ್ಜೆಗಳು ಮರಣದ ಕಡೆಗೆ ಹೋಗುತ್ತವೆ. ಆಕೆ ನಿನ್ನನ್ನು ನೇರವಾಗಿ ಪಾತಾಳಕ್ಕೆ ನಡೆಸುತ್ತಾಳೆ!


ಅನೇಕ ಮೂಢ ಯೌವನಸ್ಥರನ್ನು ಕಂಡೆನು. ಅವರಲ್ಲಿ ತುಂಬಾ ಮೂಢನಾಗಿದ್ದ ಒಬ್ಬ ಯೌವನಸ್ಥನನ್ನು ಗಮನಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು