Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:24 - ಪರಿಶುದ್ದ ಬೈಬಲ್‌

24 ಅವು ನಿನ್ನನ್ನು ಕೆಟ್ಟ ಹೆಂಗಸಿನ ಬಳಿಗೆ ಹೋಗದಂತೆ ತಡೆಯುತ್ತವೆ; ಗಂಡನನ್ನು ಬಿಟ್ಟಂಥ ಹೆಂಗಸಿನ ನಯವಾದ ನುಡಿಗಳಿಂದ ತಪ್ಪಿಸಿ ಕಾಪಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದು ಕೆಟ್ಟ ಸ್ತ್ರೀಯಿಂದಲೂ, ವೇಶ್ಯೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕೆಟ್ಟ ಹೆಂಗಸರ ಸಹವಾಸದಿಂದ, ಪರಸ್ತ್ರೀಯರ ಮಾತಿನ ಮೋಡಿಯಿಂದ, ಅವು ಕಾಪಾಡಬಲ್ಲವು ನಿನ್ನನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದು ಕೆಟ್ಟ ಹೆಂಗಸಿನಿಂದಲೂ ಪರಸ್ತ್ರೀಯ ನಾಲಿಗೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವು ಕೆಟ್ಟ ಹೆಂಗಸಿನಿಂದಲೂ, ಪರಸ್ತ್ರೀಯ ವಂಚಕ ಮಾತಿನಿಂದಲೂ ನಿನ್ನನ್ನು ತಪ್ಪಿಸಿ ಕಾಪಾಡಬಲ್ಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:24
7 ತಿಳಿವುಗಳ ಹೋಲಿಕೆ  

ವ್ಯಭಿಚಾರಿಣಿಯು ನಿನ್ನೊಡನೆ ಸವಿಮಾತುಗಳನ್ನಾಡಿ ತನ್ನೊಡನೆ ಪಾಪ ಮಾಡುವಂತೆ ನಿನ್ನನ್ನು ಒತ್ತಾಯಿಸಬಹುದು.


ಆಗ ಅವು ನಿನ್ನನ್ನು ಬೇರೆ ಹೆಂಗಸರಿಂದ ತಪ್ಪಿಸಿ ಕಾಪಾಡುತ್ತವೆ; ನಿನ್ನನ್ನು ಪಾಪಕ್ಕೆ ನಡೆಸುವಂಥ ಅವರ ಸವಿ ಮಾತುಗಳಿಂದ ತಪ್ಪಿಸಿ ಕಾಪಾಡುತ್ತವೆ.


ಮತ್ತೊಬ್ಬನ ಹೆಂಡತಿಯ ಮಾತುಗಳು ಜೇನಿನಂತೆ ಸಿಹಿಯಾಗಿವೆ; ಎಣ್ಣೆಗಿಂತ ನಯವಾಗಿವೆ.


ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡುಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಣಿಗಳಂತಿವೆ. ಆ ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಆ ಸ್ತ್ರೀಯರ ಬಳಿಯಿಂದ ಓಡಿಹೋಗುವನು; ಪಾಪಿಯಾದರೋ ಅವರಿಗೆ ಸಿಕ್ಕಿಕೊಳ್ಳುವನು.


ಆದರೆ ಯೋಸೇಫನು ತಿರಸ್ಕರಿಸಿದನು. ಅವನು, “ನನ್ನ ಧಣಿಯು ಈ ಮನೆಯ ಜವಾಬ್ದಾರಿಕೆಗಳನ್ನೆಲ್ಲಾ ನನಗೆ ವಹಿಸಿ ನಿಶ್ಚಿಂತೆಯಿಂದಿದ್ದಾನೆ.


ಪರಸ್ತ್ರೀಯಲ್ಲಿ ಮೋಹಗೊಂಡು ಆಕೆಯನ್ನು ಅಪ್ಪಿಕೊಳ್ಳಬೇಡ.


ಅವಳು ಆ ಯೌವನಸ್ಥನನ್ನು ಪ್ರೇರೇಪಿಸಲು ಈ ಮಾತುಗಳನ್ನಾಡಿದಳು. ಆಕೆಯ ಸವಿನುಡಿಗಳು ಅವನನ್ನು ಮರುಳುಗೊಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು