ಜ್ಞಾನೋಕ್ತಿಗಳು 6:29 - ಪರಿಶುದ್ದ ಬೈಬಲ್29 ಬೇರೊಬ್ಬನ ಹೆಂಡತಿಯೊಡನೆ ಮಲಗಿಕೊಳ್ಳುವವನಿಗೆ ಇದೇ ರೀತಿಯಾಗುವುದು. ಅವನು ದಂಡನೆ ಅನುಭವಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅಂತೆಯೆ ನೆರೆಯವನ ಸತಿಯನ್ನು ಕೂಡುವವನ ಗತಿಯು; ಆಕೆಯನ್ನು ಮುಟ್ಟುವವನು ತಪ್ಪಿಸಿಕೊಳ್ಳನು ದಂಡನೆಯನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವದು, ಯಾವನು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು. ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.