ಜ್ಞಾನೋಕ್ತಿಗಳು 6:30 - ಪರಿಶುದ್ದ ಬೈಬಲ್30-31 ಹಸಿವೆಗೊಂಡಿರುವವನು ಕದ್ದುತಿಂದರೂ ತಿನ್ನಬಹುದು. ಅವನು ಸಿಕ್ಕಿಕೊಂಡರೆ ತಾನು ಕದ್ದದ್ದಕ್ಕಿಂತ ಏಳರಷ್ಟು ಹೆಚ್ಚಾಗಿ ಕೊಡಬೇಕು. ಒಂದುವೇಳೆ ಅವನು ತನ್ನಲ್ಲಿರುವ ಪ್ರತಿಯೊಂದನ್ನೂ ಕೊಡಬೇಕಾಗಬಹುದು! ಆದರೆ ಬೇರೆಯವರು ಅವನನ್ನು ಅರ್ಥಮಾಡಿಕೊಳ್ಳುತ್ತಾರೆ; ಅವನ ಬಗ್ಗೆ ಅವರಿಗಿರುವ ಗೌರವವು ಕಳೆದು ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಹಸಿವನ್ನು ನೀಗಿಸಿಕೊಳ್ಳಲು ಕಳವು ಮಾಡಿದರೆ, ಅಷ್ಟು ಹೀಯಾಳಿಸರು ಜನರು ಅಂಥ ಬಡವನನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಹಸಿದಾಗ ಕಳ್ಳನು ತನ್ನ ಹಸಿವೆಯನ್ನು ತೃಪ್ತಿಪಡಿಸಲು ಕಳವು ಮಾಡಿದರೆ, ಜನರು ಅವನನ್ನು ಹೀಯಾಳಿಸುವುದಿಲ್ಲ. ಅಧ್ಯಾಯವನ್ನು ನೋಡಿ |