Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:14 - ಪರಿಶುದ್ದ ಬೈಬಲ್‌

14 “ಈ ದಿನ ನಾನು ಸಮಾಧಾನಯಜ್ಞವನ್ನು ಅರ್ಪಿಸಬೇಕಿತ್ತು. ನನ್ನ ಹರಕೆಯನ್ನು ಸಲ್ಲಿಸಿದೆನು. ಯಜ್ಞದಲ್ಲಿ ಉಳಿದ ಮಾಂಸ ನನ್ನಲ್ಲಿ ಬಹಳಷ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಎಲೈ, ಈ ದಿನ ನನ್ನ ಹರಕೆಗಳನ್ನು ಸಲ್ಲಿಸಿದ್ದೇನೆ, ಸಮಾಧಾನ ಯಜ್ಞಶೇಷವು ನನ್ನಲ್ಲಿದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನನ್ನ ಬಯಕೆ ಈಡೇರಲೆಂದು ಬಲಿಯರ್ಪಿಸಿದ್ದೇನೆ; ಇಂದೇ ನನ್ನ ಹರಕೆಯನ್ನು ತೀರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎಲೈ, ಈ ದಿವಸ ನನ್ನ ಹರಿಕೆಗಳನ್ನು ಸಲ್ಲಿಸಿದ್ದೇನೆ, ಸಮಾಧಾನಯಜ್ಞಶೇಷವು ನನ್ನಲ್ಲಿದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಈ ದಿವಸ ನನ್ನ ಹರಕೆಗಳನ್ನು ನಾನು ಸಲ್ಲಿಸಿದ್ದೇನೆ. ನಾನು ನನ್ನ ಸಮಾಧಾನದ ಯಜ್ಞವನ್ನು ಅರ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:14
11 ತಿಳಿವುಗಳ ಹೋಲಿಕೆ  

ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.


“ಸಮಾಧಾನಯಜ್ಞದ ಕಟ್ಟಳೆಗಳು ಇಂತಿವೆ: ಯಾರಾದರೂ ಯೆಹೋವನಿಗೆ ಕೃತಜ್ಞತೆಯಿಂದ ಸಮಾಧಾನಯಜ್ಞಗಳನ್ನು ಅರ್ಪಿಸಬೇಕೆಂದಿದ್ದರೆ,


ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.


ಜಗಳದ ಮನೆಯಲ್ಲಿ ಮೃಷ್ಠಾನ್ನ ತಿನ್ನುವುದಕ್ಕಿಂತಲೂ ಸಮಾಧಾನದ ಮನೆಯಲ್ಲಿ ಒಣರೊಟ್ಟಿಯನ್ನು ತಿನ್ನುವುದೇ ಮೇಲು.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಆದ್ದರಿಂದ ನನ್ನೊಂದಿಗೆ ಬರುವಂತೆ ನಿನ್ನನ್ನು ಕರೆಯಲು ಬಂದೆ. ನಿನಗಾಗಿ ಹುಡುಕಾಡಿ ಈಗ ನಿನ್ನನ್ನು ಕಂಡುಕೊಂಡೆ.


“ನಿಮ್ಮ ಅಯೋಗ್ಯವಾದ ಯಜ್ಞಗಳನ್ನು ನನ್ನ ಬಳಿಗೆ ತರಬೇಡಿ; ನಿಮ್ಮ ಧೂಪವು ನನಗೆ ಅಸಹ್ಯ; ನಿಮ್ಮ ಅಮಾವಾಸ್ಯೆಯನ್ನಾಗಲಿ ಹಬ್ಬವನ್ನಾಗಲಿ ಸಬ್ಬತ್ತನ್ನಾಗಲಿ ನಾನು ಸಹಿಸಲಾರೆ. ನಿಮ್ಮ ಪವಿತ್ರಕೂಟಗಳಲ್ಲಿ ನೀವು ಮಾಡುವ ದುಷ್ಟತನವನ್ನು ನಾನು ಸಹಿಸಲಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು