Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:20 - ಪರಿಶುದ್ದ ಬೈಬಲ್‌

20 ದೀರ್ಘಪ್ರಯಾಣಕ್ಕೆ ಬೇಕಾದಷ್ಟು ಹಣವನ್ನು ಅವನು ತನ್ನೊಡನೆ ತೆಗೆದುಕೊಂಡು ಹೋಗಿದ್ದಾನೆ; ಎರಡು ವಾರಗಳವರೆಗೆ ಅವನು ಮನೆಗೆ ಬರುವುದಿಲ್ಲ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು” ಎಂದು ಹೇಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ; ಮನೆಗೆ ಬರುವಂತಿಲ್ಲ ಹುಣ್ಣಿಮೆಯ ತನಕ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು ಎಂಬದಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ತನ್ನೊಂದಿಗೆ ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ; ಹುಣ್ಣಿಮೆಗೆ ಮುಂಚೆ ಅವನು ಮನೆಗೆ ಬರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:20
5 ತಿಳಿವುಗಳ ಹೋಲಿಕೆ  

ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.


ಬಳಿಕ ಸಹೋದರರು ತಮ್ಮ ಚೀಲಗಳಿಂದ ದವಸಧಾನ್ಯಗಳನ್ನು ತೆಗೆಯಲು ಹೋದಾಗ ಪ್ರತಿಯೊಬ್ಬ ಸಹೋದರನ ಚೀಲದಲ್ಲಿಯೂ ತಾವು ಪಾವತಿ ಮಾಡಿದ್ದ ಹಣವನ್ನು ಕಂಡು ತುಂಬ ಭಯಗೊಂಡರು.


ನನ್ನ ಗಂಡನು ವ್ಯಾಪಾರಕ್ಕಾಗಿ ದೂರದೇಶಕ್ಕೆ ಹೋಗಿದ್ದಾನೆ.


ಇನ್ನೊಬ್ಬನೊಡನೆ ಲೈಂಗಿಕ ಸಂಬಂಧ ಮಾಡಿರಬಹುದು. ಅವಳ ಈ ಕಾರ್ಯವು ಗಂಡನಿಗೆ ಗೊತ್ತಿಲ್ಲದಿರಬಹುದು; ಯಾವ ಸಾಕ್ಷಿಯೂ ಇಲ್ಲದಿರುವುದರಿಂದ ಮತ್ತು ಅವಳು ಈ ಕಾರ್ಯ ಮಾಡುತ್ತಿರುವಾಗಲೇ ಸಿಕ್ಕಿಕೊಂಡಿಲ್ಲದಿರುವುದರಿಂದ ತಾನು ತನ್ನನ್ನು ಅಶುದ್ಧಳನ್ನಾಗಿ ಮಾಡಿಕೊಂಡ ಸತ್ಯಾಂಶವನ್ನು ಆಕೆ ಗುಪ್ತವಾಗಿಡಬಹುದು.


“ನೀವು ಕದ್ದ ನೀರು ಸ್ವಂತ ನೀರಿಗಿಂತಲೂ ಹೆಚ್ಚು ರುಚಿಯಾಗಿರುವುದು. ನೀವು ಕದ್ದ ರೊಟ್ಟಿ ತಯಾರಿಸಿದ ರೊಟ್ಟಿಗಿಂತಲೂ ಹೆಚ್ಚು ರುಚಿಯಾಗಿರುವುದು” ಎಂದು ಹೇಳುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು