Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:25 - ಪರಿಶುದ್ದ ಬೈಬಲ್‌

25 ಅಂತಹ ಹೆಂಗಸಿನ ಬಗ್ಗೆ ಯೋಚಿಸಲೂಬೇಡಿ, ಆಕೆಗಾಗಿ ಅಲೆದಾಡಲೂಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿಯೂ ಅವಳ ಮಾರ್ಗದಲ್ಲಿ ನಡೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಿಮ್ಮ ಹೃದಯ ಅವಳ ದಾರಿಯತ್ತ ತಿರುಗದಿರಲಿ; ಅಪ್ಪಿತಪ್ಪಿ ನಿಮ್ಮ ಕಾಲು ಅವಳ ಹಾದಿಯನ್ನು ತುಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿ ಅವಳ ಮಾರ್ಗದಲ್ಲಿ ನಡೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವಳ ಮಾರ್ಗಗಳಿಗೆ ನಿಮ್ಮ ಹೃದಯವು ತಿರುಗದೆ ಇರಲಿ; ತಪ್ಪಿಯೂ ಅವಳ ದಾರಿಯಲ್ಲಿ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:25
10 ತಿಳಿವುಗಳ ಹೋಲಿಕೆ  

ವ್ಯಭಿಚಾರಿಣಿಯಿಂದ ದೂರವಾಗಿರು. ಅವಳ ಮನೆಯ ಬಾಗಿಲ ಸಮೀಪಕ್ಕೂ ಹೋಗಬೇಡ.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


ಆಕೆಯ ಸೌಂದರ್ಯವನ್ನು ಕಂಡು ಹೃದಯದಲ್ಲಿ ಆಸೆಪಡಬೇಡ. ಆಕೆಯ ಕಣ್ಣುಗಳು ನಿನ್ನನ್ನು ವಶಮಾಡಿಕೊಳ್ಳಲು ಬಿಡಬೇಡ.


ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.


ಅವನು ಬುದ್ಧಿವಾದವನ್ನು ತಿರಸ್ಕರಿಸಿದ್ದರಿಂದ ಸಾಯುವನು; ತನ್ನ ಅತಿಮೂರ್ಖತನದಿಂದ ದಾರಿತಪ್ಪುವನು.


ನಾನು ಕಳೆದುಹೋದ ಕುರಿಯಂತೆ ಅಲೆದಾಡುತ್ತಿದ್ದೇನೆ. ನನಗೋಸ್ಕರ ಹುಡುಕುತ್ತಾ ಬಾ. ನಿನ್ನ ಸೇವಕನಾದ ನಾನು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿಲ್ಲ.


ಆಕೆಯಿಂದ ಅನೇಕ ಗಂಡಸರು ಬಿದ್ದುಹೋಗಿದ್ದಾರೆ; ಅವಳು ಅನೇಕ ಗಂಡಸರನ್ನು ನಾಶಮಾಡಿದ್ದಾಳೆ.


ತಮ್ಮ ಕೆಲಸಕಾರ್ಯಗಳ ನಿಮಿತ್ತ ಹಾದುಹೋಗುವ ಜನರನ್ನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು