Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:13 - ಪರಿಶುದ್ದ ಬೈಬಲ್‌

13 ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:13
27 ತಿಳಿವುಗಳ ಹೋಲಿಕೆ  

ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.


ಯೆಹೋವನನ್ನು ಪ್ರೀತಿಸುವವರೇ, ದುಷ್ಟತನವನ್ನು ದ್ವೇಷಿಸಿರಿ. ದೇವರು ತನ್ನ ಭಕ್ತರನ್ನು ಸಂರಕ್ಷಿಸುವನು. ದೇವರು ತನ್ನ ಸದ್ಭಕ್ತರನ್ನು ಕೆಡುಕರಿಂದ ರಕ್ಷಿಸುವನು.


ಇನ್ನು ಮುಂದೆ ಬಡಾಯಿಕೊಚ್ಚಬೇಡಿ! ಸೊಕ್ಕಿನ ಮಾತುಗಳನ್ನು ಆಡಬೇಡಿ! ಏಕೆಂದರೆ ಯೆಹೋವನು ಪ್ರತಿಯೊಂದನ್ನು ಬಲ್ಲನು. ಆತನು ಮನುಷ್ಯರನ್ನು ಮುನ್ನಡೆಸುತ್ತಾನೆ ಮತ್ತು ತೂಗಿ ನೋಡುತ್ತಾನೆ.


ಸತ್ಯವನ್ನು ಸೊಟ್ಟಗೆ ಮಾಡದಿರು; ಸುಳ್ಳನ್ನು ಹೇಳದಿರು.


ಎಲ್ಲಾ ವಿಧವಾದ ಕೆಟ್ಟತನದಿಂದ ದೂರವಾಗಿರಿ.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.


ನಾನು ನಿನ್ನ ಆಜ್ಞೆಗಳಿಗೆಲ್ಲಾ ಎಚ್ಚರಿಕೆಯಿಂದ ವಿಧೇಯನಾಗುವೆನು. ನಾನು ಸುಳ್ಳು ಉಪದೇಶಗಳನ್ನು ದ್ವೇಷಿಸುವೆನು.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ಕೆಡುಕನೂ ನೀಚನೂ ಆಗಿರುವವನು ಸುಳ್ಳಾಡುತ್ತಾ ಅಡ್ಡಾಡುತ್ತಾನೆ.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


ನಿಮ್ಮ ನೆರೆಯವನಿಗೆ ಹಾನಿಮಾಡುವುದನ್ನು ಗುಟ್ಟಾಗಿ ಆಲೋಚಿಸಬೇಡಿರಿ. ಸುಳ್ಳು ವಾಗ್ದಾನ ಮಾಡಬೇಡಿರಿ. ಅವುಗಳನ್ನೆಲ್ಲಾ ಮಾಡುವದರಲ್ಲಿ ಆನಂದಿಸಬೇಡಿರಿ. ಯಾಕೆಂದರೆ ಅವುಗಳನ್ನು ನಾನು ದ್ವೇಷಿಸುತ್ತೇನೆ.” ಇದು ಯೆಹೋವನ ನುಡಿ.


ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.


ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. ನಾನು ಅವರಂತೆ ಮಾಡುವುದಿಲ್ಲ!


ಒಳ್ಳೆಯವರು ಯಾವಾಗಲೂ ಜ್ಞಾನದ ಮಾತುಗಳನ್ನು ಹೇಳುತ್ತಾರೆ; ಕೆಡುಕರ ಮಾತನ್ನು ಜನರು ಕೇಳುವುದಿಲ್ಲ.


ನಿನ್ನ ಉಪದೇಶಗಳು ನನ್ನನ್ನು ಜ್ಞಾನಿಯನ್ನಾಗಿ ಮಾಡುತ್ತವೆ, ಆದ್ದರಿಂದ ನಾನು ದುರುಪದೇಶಗಳನ್ನು ದ್ವೇಷಿಸುವೆನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.


ದುಷ್ಟರ ಜೀವಿತವು ಯೆಹೋವನಿಗೆ ಅಸಹ್ಯ. ಒಳ್ಳೆಯದನ್ನು ಮಾಡಲಿಚ್ಛಿಸುವವರು ಯೆಹೋವನಿಗೆ ಪ್ರಿಯ.


ದೇವರು ಹೇಳುವುದೇನೆಂದರೆ: “ಈ ಲೋಕಕ್ಕೆ ನಾನು ಕೆಡುಕನ್ನು ಉಂಟುಮಾಡುವೆನು. ದುಷ್ಟಜನರನ್ನು ಅವರ ಪಾಪಗಳಿಗಾಗಿ ನಾನು ಶಿಕ್ಷಿಸುವೆನು. ಅಹಂಕಾರಿಗಳು ಗರ್ವವನ್ನು ಕಳೆದುಕೊಳ್ಳುವಂತೆ ಮಾಡುವೆನು; ಕೀಳುಜನರ ಹೊಗಳಿಕೆಗಳನ್ನು ನಿಲ್ಲಿಸುವೆನು.


ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.


ಇದಲ್ಲದೆ ದೇವರು ಮನುಷ್ಯರಿಗೆ, ‘ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ; ದುಷ್ಟತನವನ್ನು ತೊರೆದುಬಿಡುವುದೇ ವಿವೇಕ’ ಎಂದು ಹೇಳಿದನು.”


ಗರ್ವಿಷ್ಠರು ಯೆಹೋವನಿಗೆ ಅಸಹ್ಯ. ಆ ಗರ್ವಿಷ್ಠರಿಗೆ ಯೆಹೋವನ ದಂಡನೆ ಖಂಡಿತ.


ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು