ಜ್ಞಾನೋಕ್ತಿಗಳು 8:15 - ಪರಿಶುದ್ದ ಬೈಬಲ್15 ನನ್ನ ಸಹಾಯದಿಂದ ರಾಜರುಗಳು ರಾಜ್ಯವಾಳುವರು; ಅಧಿಪತಿಗಳು ನ್ಯಾಯವಾದ ಕಾನೂನುಗಳನ್ನು ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ರಾಜರು ಆಳುವುದು ನನ್ನ ಸಹಾಯದಿಂದ ಅಧಿಪತಿಗಳು ನ್ಯಾಯತೀರ್ಪು ಮಾಡುವುದು ನನ್ನಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನನ್ನ ಮೂಲಕ ರಾಜರು ಆಳುವರು; ಪ್ರಧಾನರು ನ್ಯಾಯವಾದ ತೀರ್ಪು ಕೊಡುವರು. ಅಧ್ಯಾಯವನ್ನು ನೋಡಿ |
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.
ಆಗ ದೇವರು ಸೊಲೊಮೋನನಿಗೆ, “ನಿನ್ನ ಕೋರಿಕೆ ಒಳ್ಳೆಯದಾಗಿದೆ. ನೀನು ಐಶ್ವರ್ಯವನ್ನಾಗಲಿ ಗೌರವವನ್ನಾಗಲಿ ಬೆಳ್ಳಿಬಂಗಾರಗಳನ್ನಾಗಲಿ ಕೇಳಲಿಲ್ಲ. ನಿನ್ನ ವೈರಿಗಳನ್ನು ನಿರ್ಮೂಲ ಮಾಡುವಂತಾಗಲಿ ಅಥವಾ ನಿನಗೆ ದೀರ್ಘಾಯುಷ್ಯವನ್ನು ಕೊಡು ಎಂದಾಗಲಿ ನೀನು ಕೇಳಿಕೊಳ್ಳದೆ ರಾಜ್ಯವನ್ನು ನ್ಯಾಯವಾಗಿ ಆಳಲು ಬೇಕಾದ ಜ್ಞಾನವಿವೇಕಗಳನ್ನು ಕೇಳಿಕೊಂಡೆ. ನಾನು ಆರಿಸಿಕೊಂಡಿರುವ ಜನಾಂಗದ ಮೇಲೆ ಆಡಳಿತ ನಡಿಸುವಾಗ ಯೋಗ್ಯವಾದ ಸಲಹೆ ಕೊಡುವಂತೆ ಜ್ಞಾನವನ್ನು ಕೇಳಿರುತ್ತೀ.