Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:22 - ಪರಿಶುದ್ದ ಬೈಬಲ್‌

22 “ಯೆಹೋವನು ‘ಜ್ಞಾನ’ವೆಂಬ ನನ್ನನ್ನು ತನ್ನ ಸೃಷ್ಟಿ ಕ್ರಮದಲ್ಲಿ ಮೊದಲು ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನಕಾರ್ಯಗಳಲ್ಲಿ ನಾನೇ ಪ್ರಥಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತನ್ನ ಸೃಷ್ಟಿಕ್ರಮದಲ್ಲಿ ಸರ್ವೇಶ್ವರ ನಿರ್ಮಿಸಿದ ನನ್ನನ್ನು ಮೊತ್ತಮೊದಲು ಆತನ ಪುರಾತನ ಕಾರ್ಯಕ್ರಮಗಳಲ್ಲಿ ನಾನೇ ಪ್ರಥಮಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನ ಕಾರ್ಯಗಳಲ್ಲಿ ನಾನೇ ಪ್ರಥಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಯೆಹೋವ ದೇವರು ತಮ್ಮ ಸೃಷ್ಟಿಕ್ರಮದಲ್ಲಿ ನನ್ನನ್ನು ಮೊದಲು ನಿರ್ಮಿಸಿದರು, ದೇವರ ಪುರಾತನ ಕಾರ್ಯಗಳಲ್ಲಿ ನಾನೇ ಮೊದಲು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:22
8 ತಿಳಿವುಗಳ ಹೋಲಿಕೆ  

ಅವುಗಳಿಗಿಂತ ಮೊದಲೇ ಕ್ರಿಸ್ತನಿದ್ದನು. ಸಮಸ್ತಕ್ಕೂ ಆತನೇ ಆಧಾರಭೂತನಾಗಿದ್ದಾನೆ.


ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸೃಷ್ಟಿಸಿದನು. ಆತನು ವಿವೇಕದ ಮೂಲಕ ಆಕಾಶವನ್ನು ಸೃಷ್ಟಿಸಿದನು.


ಯೆಹೋವನೇ, ನೀನು ಅನೇಕ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ. ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು.


“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:


“ಜ್ಞಾನದ ಮಾರ್ಗವನ್ನು ತಿಳಿದಿರುವವನು ದೇವರೊಬ್ಬನೇ. ಅದರ ವಾಸಸ್ಥಳವು ಗೊತ್ತಿರುವುದು ಆತನಿಗೊಬ್ಬನಿಗೇ.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು