Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:30 - ಪರಿಶುದ್ದ ಬೈಬಲ್‌

30 ನಾನು ಆತನ ಪಕ್ಕದಲ್ಲಿ ನಿಪುಣ ಕೆಲಸಗಾರನಂತಿದ್ದೆನು. ನಾನು ಪ್ರತಿದಿನವೂ ಸಂತೋಷಪಡುತ್ತಾ ಆತನ ಸನ್ನಿಧಿಯಲ್ಲಿ ಯಾವಾಗಲೂ ಉಲ್ಲಾಸಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನು ಆತನ ಹತ್ತಿರ ಶಿಲ್ಪಿಯಾಗಿದ್ದುಕೊಂಡು ಪ್ರತಿದಿನವೂ ಆನಂದಿಸುತ್ತಾ, ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಾನು ಆತನ ಬಳಿ ಕುಶಲ ಶಿಲ್ಪಿಯಂತಿದ್ದೆ ಅನುದಿನವೂ ಆತನಿಗೆ ಆನಂದವನ್ನೀಯುತ್ತಿದ್ದೆ ಸದಾ ಆತನ ಮುಂದೆ ಸಂತೋಷಪಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾನು ಆತನ ಹತ್ತಿರ ಶಿಲ್ಪಿಯಾಗಿದ್ದುಕೊಂಡು ಪ್ರತಿದಿನವೂ ಆನಂದಿಸುತ್ತಾ ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ನಾನು ಅವರೊಂದಿಗೆ ಕುಶಲ ಶಿಲ್ಪಿಯಂತೆ ಅವರ ಹತ್ತಿರ ಇದ್ದೆನು. ಅವರ ಸನ್ನಿಧಿಯಲ್ಲಿ ಯಾವಾಗಲೂ ಆನಂದಿಸುತ್ತಾ ಅನುದಿನವೂ ಸಂತೋಷಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:30
8 ತಿಳಿವುಗಳ ಹೋಲಿಕೆ  

ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ಈತನೇ (ಯೇಸು) ನನ್ನ ಪ್ರಿಯ ಮಗನು. ಈತನನ್ನು ನಾನು ಬಹಳ ಮೆಚ್ಚಿದ್ದೇನೆ” ಎಂದು ಹೇಳಿತು.


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು.


ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೊ!” ಎಂದು ಹೇಳಿದನು. ಆಗ ಪರಲೋಕದಿಂದ, “ನನ್ನ ಹೆಸರನ್ನು ಮಹಿಮೆಪಡಿಸಿಕೊಂಡಿದ್ದೇನೆ. ನಾನು ಮತ್ತೆ ಮಹಿಮೆಪಡಿಸಿಕೊಳ್ಳುವೆನು” ಎಂಬ ವಾಣಿ ಆಯಿತು.


ದೇವರು ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡುಗಡೆ ಮಾಡಿದ್ದಾನೆ. ಆತನು ನಮ್ಮನ್ನು ತನ್ನ ಪ್ರಿಯ ಮಗನ (ಯೇಸುವಿನ) ರಾಜ್ಯದೊಳಗೆ ಸೇರಿಸಿದ್ದಾನೆ.


ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು