ಜ್ಞಾನೋಕ್ತಿಗಳು 8:36 - ಪರಿಶುದ್ದ ಬೈಬಲ್36 ಆದರೆ ನನ್ನನ್ನು ಕಂಡುಕೊಳ್ಳಲಾರದವನು ತನಗೇ ಕೇಡುಮಾಡಿಕೊಳ್ಳುವನು. ನನ್ನನ್ನು ದ್ವೇಷಿಸುವ ಜನರೆಲ್ಲರೂ ಮರಣವನ್ನು ಪ್ರೀತಿಸುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.” ಅಧ್ಯಾಯವನ್ನು ನೋಡಿ |
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’