ಜ್ಞಾನೋಕ್ತಿಗಳು 9:12 - ಪರಿಶುದ್ದ ಬೈಬಲ್12 ನೀನು ಜ್ಞಾನಿಯಾಗಿದ್ದರೆ ನಿನ್ನ ಜ್ಞಾನವು ನಿನಗೇ ಲಾಭಕರ. ಆದರೆ ನೀನು ದುರಾಭಿಮಾನದಿಂದ ಬೇರೆಯವರನ್ನು ಗೇಲಿಮಾಡಿದರೆ ನಿನ್ನನ್ನೇ ಕಷ್ಟಕ್ಕೆ ಗುರಿಮಾಡಿಕೊಳ್ಳುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀನು ಜ್ಞಾನವಂತನಾದರೆ ನಿನ್ನ ಜ್ಞಾನ ನಿನಗೇ ಲಾಭಕರ; ಕುಚೋದ್ಯಗಾರನು ಆದರೆ ಸವಿಯುವೆ ಅದರ ಪ್ರತೀಕಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀನು ಜ್ಞಾನಿಯಾದರೆ, ನಿನ್ನ ಜ್ಞಾನವು ನಿನಗೆ ಪ್ರತಿಫಲ ಕೊಡುವುದು; ನೀನು ನಿಂದಿಸುವವನಾದರೆ, ನೀನೇ ಅದರ ಫಲವನ್ನು ಅನುಭವಿಸುವಿ. ಅಧ್ಯಾಯವನ್ನು ನೋಡಿ |
ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.