Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:3 - ಪರಿಶುದ್ದ ಬೈಬಲ್‌

3 ಆಮೇಲೆ ಆಕೆ, ತನ್ನ ಸೇವಕಿಯರನ್ನು ಕಳುಹಿಸಿ ನಗರದ ಎತ್ತರವಾದ ಸ್ಥಳದಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಗರದ ರಾಜಬೀದಿಗಳಿಗೆ ತನ್ನ ದಾಸಿಯರನ್ನು ಕಳುಹಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಕೆಯು ತನ್ನ ದಾಸಿಯನ್ನು ಕಳುಹಿಸಿ ಮೂಢನಾಗಿರುವವನು ಈ ಕಡೆಗೆ ತಿರುಗಲಿ ಎಂದು ಪಟ್ಟಣದ ರಾಜಮಾರ್ಗಗಳ ಅಗ್ರಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಕೆಯು ತನ್ನ ದಾಸಿಯರನ್ನು ಕಳುಹಿಸುತ್ತಾಳೆ; ಆಕೆಯು ಪಟ್ಟಣದ ಅತಿ ಉನ್ನತ ಸ್ಥಳದಿಂದ ಕೂಗುತ್ತಾಳೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:3
14 ತಿಳಿವುಗಳ ಹೋಲಿಕೆ  

ಅವಳು ತನ್ನ ಮನೆಯ ಬಾಗಿಲ ಬಳಿಯಲ್ಲಿ ನಗರದ ಎತ್ತರವಾದ ಸ್ಥಳಗಳಲ್ಲಿ ಕುಳಿತಿದ್ದಾಳೆ.


ದೇವರು ಆಜ್ಞಾಪಿಸಲು ಅನೇಕರು ಈ ಸುವಾರ್ತೆಯನ್ನು ಸಾರಲು ಹೋದರು:


ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.


ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ಊಟದ ಸಮಯ ಬಂದಾಗ, ಅವನು ತನ್ನ ಸೇವಕನನ್ನು ಕಳುಹಿಸಿ, ‘ಬನ್ನಿರಿ! ಊಟ ಸಿದ್ಧವಾಗಿದೆ’ ಎಂದು ಅತಿಥಿಗಳಿಗೆ ತಿಳಿಸಿದನು.


ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’


ಆದ್ದರಿಂದ ಬೀದಿಯ ಮೂಲೆಮೂಲೆಗಳಿಗೆ ಹೋಗಿ ನೀವು ಕಂಡ ಜನರನ್ನೆಲ್ಲ ಔತಣಕ್ಕೆ ಆಹ್ವಾನಿಸಿರಿ’ ಎಂದನು.


“ಕಲಿತುಕೊಳ್ಳಬೇಕಾಗಿರುವ ಜನರೇ ಬನ್ನಿ” ಎಂದು ಕೂಗಿಕರೆಯುತ್ತಾಳೆ. ಅವಳು ಮೂಢರನ್ನು ಸಹ ಕರೆದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು