ಜ್ಞಾನೋಕ್ತಿಗಳು 9:8 - ಪರಿಶುದ್ದ ಬೈಬಲ್8 ದುರಾಭಿಮಾನಿಯನ್ನು ಗದರಿಸಬೇಡ; ಅವನು ನಿನ್ನನ್ನೇ ದ್ವೇಷ ಮಾಡುವನು. ಆದರೆ ನೀನು ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕುಚೋದ್ಯಗಾರನನ್ನು ಗದರಿಸಬೇಡ, ಅವನು ನಿನ್ನನ್ನು ದ್ವೇಷಿಸುವನು. ಜ್ಞಾನವಂತನನ್ನು ಗದರಿಸು, ಅವನು ನಿನ್ನನ್ನು ಪ್ರೀತಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು; ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪರಿಹಾಸ್ಯ ಮಾಡುವವನನ್ನು ಗದರಿಸಬೇಡ ಅವನು ನಿನ್ನನ್ನು ಹಗೆ ಮಾಡುವನು; ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. ಅಧ್ಯಾಯವನ್ನು ನೋಡಿ |
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.