ತೀತನಿಗೆ 1:16 - ಪರಿಶುದ್ದ ಬೈಬಲ್16 ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅಪ್ನಿ ದೆವಾಕ್ ವಳಕ್ತಾಂವ್ ಮನುನ್ ತೆನಿ ಸಾಂಗುನ್ ಘೆತಾತ್, ಖರೆ ತೆನಿ ಕರ್‍ತಲ್ಯಾ ಕಾಮಾನಿ ತೆನಿ ದೆವಾಕ್ ತಿರಸ್ಕಾರ್ ಕರ್‍ತಾತ್ ತೆನಿ ಬುರ್ಶೆ ಹೊಲ್ಯಾತ್ ಅನಿ ದೆವಾಕ್ ಮಾನುನ್ ಘೆಯ್‌ನ್ಯಾತ್ ಬರಿ ಕಾಮಾ ಕರುಕ್ ಯೊಗ್ಯ್ ನಾತ್ . ಅಧ್ಯಾಯವನ್ನು ನೋಡಿ |