Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:2 - ಪರಿಶುದ್ದ ಬೈಬಲ್‌

2 ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹೆ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಚ್ಯಾ ಬರೊಸ್ಯಾಚ್ಯಾ ವರ್‍ತಿ ಹೊಂದುನ್ ಹಾಯ್, ದೆವ್ ಕನ್ನಾಬಿ ಝುಟೆ ಬೊಲಿನಾ, ತೆನಿ ಅಮ್ಚ್ಯಾ ವಾಂಗ್ಡಾ ಹ್ಯಾ ಜಿವನಾಚ್ಯಾ ವಿಶಯಾತ್ ಎಳ್ಕಾಲ್ ಚಾಲು ಹೊವ್ಚ್ಯಾ ಅದ್ದಿಚ್ ಗೊಸ್ಟ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:2
46 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


ಕ್ರಿಸ್ತನು ನಮಗೆ ಕೊಡುವುದಾಗಿ ಮಾಡಿದ್ದ ವಾಗ್ದಾನವೇ ಈ ನಿತ್ಯಜೀವ.


ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.


ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ. ನಿತ್ಯಜೀವವನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಭುವಾದ ಯೇಸು ಕ್ರಿಸ್ತನ ಕರುಣೆಯನ್ನೇ ಎದುರುನೋಡುತ್ತಿರಿ.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ದೇವರ ಚಿತ್ತಾನುಸಾರವಾಗಿ ನಾನು ಅಪೊಸ್ತಲನಾದೆನು. ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ಜನರಿಗೆ ತಿಳಿಯಪಡಿಸಲು ದೇವರು ನಮ್ಮನ್ನು ಕಳುಹಿಸಿದನು.


ದೇವರು ತನ್ನ ಕೃಪೆಯಿಂದ ನಮ್ಮನ್ನು ನೀತಿವಂತರನ್ನಾಗಿ ಮಾಡಿದನು. ನಾವು ನಿತ್ಯಜೀವವನ್ನು ಪಡೆಯುವಂತೆ ಆತನು ನಮಗೆ ಪವಿತ್ರಾತ್ಮನನ್ನು ಕೊಟ್ಟನು. ಅದೇ ನಮ್ಮ ನಿರೀಕ್ಷೆ.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ದೇವರ ದೃಷ್ಟಿಯಲ್ಲಿ ಯೋಗ್ಯ ವ್ಯಕ್ತಿಯಾಗಲು ನಿನ್ನಿಂದಾದಷ್ಟು ಪ್ರಯಾಸಪಡು ಮತ್ತು ನಿನ್ನನ್ನೇ ಒಪ್ಪಿಸಿಕೊಡು. ತನ್ನ ಕೆಲಸದಲ್ಲಿ ನಾಚಿಕೆಪಡದಿರುವ ಕೆಲಸಗಾರನಾಗು, ಅಂದರೆ ಸತ್ಯೋಪದೇಶವನ್ನು ಯೋಗ್ಯವಾದ ರೀತಿಯಲ್ಲಿ ತಿಳಿಸುವವನಾಗು.


ನಾವು ನಂಬಿಗಸ್ತರಾಗಿಲ್ಲದಿದ್ದರೂ, ಆತನು ಇನ್ನೂ ನಂಬಿಗಸ್ತನಾಗಿರುವನು; ಏಕೆಂದರೆ ಆತನು ತನ್ನ ಸ್ವಭಾವಕ್ಕೆ ವಿರುದ್ಧನಾಗಲಾರನು.


ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಯೆಹೋವನು ಸರ್ವಕಾಲದಲ್ಲೂ ಇರುವನು. ಯೆಹೋವನು ಸುಳ್ಳಾಡುವುದಿಲ್ಲ; ಆತನು ಮನುಷ್ಯನಂತೆ ಪದೇಪದೇ ಮನಸ್ಸನ್ನು ಬದಲಾಯಿಸುವವನಲ್ಲ” ಎಂದು ಹೇಳಿದನು.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ನೀನು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಯುವಕರಿಗೆ ಸರ್ವವಿಧದಲ್ಲಿಯೂ ಮಾದರಿಯಾಗಿರಬೇಕು. ನಿನ್ನ ಉಪದೇಶದಲ್ಲಿ ಯಥಾರ್ಥತೆಯನ್ನು ಮತ್ತು ಗಂಭೀರತೆಯನ್ನು ತೋರಿಸಿಕೊಡು.


ಆದರೆ ನಾವು ಹಗಲಿಗೆ ಸೇರಿದವರಾದ್ದರಿಂದ ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ನಾವು ನಮ್ಮನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಪ್ರೀತಿಯನ್ನೂ ನಂಬಿಕೆಯನ್ನೂ ಧರಿಸಿಕೊಳ್ಳಬೇಕು. ರಕ್ಷಣೆಯ ನಿರೀಕ್ಷೆಯು ನಮಗೆ ಶಿರಸ್ತ್ರಾಣವಾಗಿರಬೇಕು.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.


ಆಗ ಪರಲೋಕದಲ್ಲಿ ಒಂದು ನಿಧಿಯನ್ನು ಅವರು ಕೂಡಿಟ್ಟು ಕೊಂಡಂತಾಗುತ್ತದೆ. ಆ ನಿಧಿಯೇ ಅವರ ಮುಂದಿನ ಜೀವಿತಕ್ಕೆ ಭದ್ರವಾದ ಅಸ್ತಿವಾರವಾಗಿದೆ. ಹೀಗೆ ಅವರು ನಿಜವಾದ ಜೀವಿತವನ್ನು ಹೊಂದಿಕೊಳ್ಳುವರು.


ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.


‘ಆದಿಯಿಂದಲೂ ಈ ಕಾರ್ಯಗಳನ್ನು ತಿಳಿಯಪಡಿಸಲಾಗಿದೆ.’


ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ.


ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.


ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನಾವೆಲ್ಲಿಗೆ ಹೋಗೋಣ? ನಿತ್ಯಜೀವವನ್ನು ಕೊಡುವ ಸಂಗತಿಗಳು ನಿನ್ನಲ್ಲಿವೆ.


ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು.


ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ!


ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ.


ಆ ಯೆಹೂದ್ಯರು ಪ್ರಭುವಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದುಹಾಕಿದರು. ತಮ್ಮ ದೇಶದಿಂದ (ಜುದೇಯ) ನಮ್ಮನ್ನು ಬಲವಂತವಾಗಿ ಹೊರಗಟ್ಟಿದರು. ಅವರು ದೇವರಿಗೆ ಮೆಚ್ಚಿಕೆಯಾದವರಾಗಿಲ್ಲ ಮತ್ತು ಜನರೆಲ್ಲರ ವಿರುದ್ಧವಾಗಿದ್ದಾರೆ.


ದೇವರಿಗೆ ಮಹಿಮೆಯಾಗಲಿ. ನಿಮ್ಮನ್ನು ನಂಬಿಕೆಯಲ್ಲಿ ಬಲಗೊಳಿಸಬಲ್ಲಾತನು ದೇವರೊಬ್ಬನೇ. ನಾನು ಉಪದೇಶಿಸುವ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಬಲಗೊಳಿಸಬಲ್ಲನು. ನಾನು ಯೇಸು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುತ್ತಿರುವುದೇ ಆ ಸುವಾರ್ತೆ. ದೇವರು ತಿಳಿಯಪಡಿಸಿದ ಆ ಸುವಾರ್ತೆಯು ರಹಸ್ಯವಾದ ಸತ್ಯವಾಗಿತ್ತು ಮತ್ತು ಆರಂಭದಿಂದಲೂ ಮರೆಯಾಗಿತ್ತು.


ನಾವು ಬಲಶಾಲಿಗಳಾಗಿದ್ದೇವೆ ಎಂಬುದಕ್ಕೆ ಈ ತಾಳ್ಮೆಯೇ ಆಧಾರ. ನಮಗೆ ನಿರೀಕ್ಷೆಯನ್ನು ಕೊಡುವಂಥದ್ದು ಈ ಆಧಾರವೇ.


ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.


ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.


ದೇವರು ತನ್ನ ಜನರಿಗೆ ಈ ಸುವಾರ್ತೆಯನ್ನು ಕೊಡುವುದಾಗಿ ಬಹುಕಾಲದ ಹಿಂದೆಯೇ ತನ್ನ ಪ್ರವಾದಿಗಳ ಮೂಲಕ ಪವಿತ್ರ ಗ್ರಂಥದಲ್ಲಿ ವಾಗ್ದಾನ ಮಾಡಿದ್ದನು.


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ನೂರರಷ್ಟು ಹೆಚ್ಚಾಗಿ ಪಡೆಯುತ್ತಾನೆ. ಈ ಪ್ರಪಂಚದಲ್ಲಿ ಅವನು ಅನೇಕ ಮನೆಗಳನ್ನು, ಸಹೋದರರನ್ನು, ಸಹೋದರಿಯರನ್ನು, ತಾಯಂದಿರನ್ನು, ಮಕ್ಕಳನ್ನು ಮತ್ತು ಭೂಮಿಯನ್ನು ಹಿಂಸೆಗಳೊಂದಿಗೆ ಪಡೆದುಕೊಳ್ಳುವನು. ಅಲ್ಲದೆ ಬರಲಿರುವ ಲೋಕದಲ್ಲಿ ಅವನು ನಿತ್ಯಜೀವವನ್ನೂ ಹೊಂದಿಕೊಳ್ಳುವನು.


ಯೇಸು ಅಲ್ಲಿಂದ ಹೊರಡಬೇಕೆಂದಿದ್ದಾಗ ಒಬ್ಬನು ಓಡಿಬಂದು, ಆತನ ಮುಂದೆ ತನ್ನ ಮೊಣಕಾಲೂರಿ, “ಒಳ್ಳೆಯ ಉಪದೇಶಕನೇ, ನಿತ್ಯಜೀವವನ್ನು ಪಡೆಯಲು ನಾನು ಏನು ಮಾಡಬೇಕು?” ಎಂದು ಕೇಳಿದನು.


ನನ್ನ ಮಾತುಗಳನ್ನು ಕೇಳದೆ ಹೋದರೆ ನೀವು ನನಗೆ ವಿರೋಧಿಗಳಾಗಿದ್ದೀರಿ. ನಿಮ್ಮ ವೈರಿಯು ನಿಮ್ಮನ್ನು ನಾಶಮಾಡುವನು.” ಯೋಹೋವನೇ ಇವುಗಳನ್ನು ನುಡಿದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು